Advertisement

ಅಲ್ಲಿಪಾದೆ ಬಡ ಕುಟುಂಬಕ್ಕೆ ನೆರವು: ಶಾಸಕ ನಾೖಕ್‌ ಭರವಸೆ

02:40 AM Jun 23, 2018 | Team Udayavani |

ಪುಂಜಾಲಕಟ್ಟೆ: ಸರಪಾಡಿ ಗ್ರಾ.ಪಂ. ವ್ಯಾಪ್ತಿಯ ಅಲ್ಲಿಪಾದೆ, ಉಜಿರಾಡಿ ಕ್ವಾಟ್ರಸ್‌ ನಲ್ಲಿ ಗುಡಿಸಲಿನಲ್ಲಿ ವಾಸಿಸುತ್ತಿರುವ ಬಡ ಕುಟುಂಬಕ್ಕೆ ಸರಕಾರಿ ಜಮೀನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು. ಇಲ್ಲಿನ ಸಂಜೀವ – ಸುನಂದಾ ದಂಪತಿ ನಾಲ್ಕು ಮಕ್ಕಳ ಜತೆ ವಾಸಕ್ಕೆ ಸರಿಯಾದ ಮನೆ ಇಲ್ಲದೆ ತಾತ್ಕಾಲಿಕವಾಗಿ ನಿರ್ಮಿಸಿದ ಗುಡಿಸಲಿನಲ್ಲಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದ ಹಿನ್ನೆಲೆಯಲ್ಲಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಮಕ್ಕಳಿಗೆ ಶಾಲೆಗೆ ಹೋಗಲು ಅಗತ್ಯವಿರುವ ವ್ಯವಸ್ಥೆ ಒದಗಿಸುವ ಭರವಸೆ ನೀಡಿದರು. 94 ಸಿ ಯೋಜನೆಯಡಿ ನಿವೇಶನದ ಹಕ್ಕುಪತ್ರ ಒದಗಿಸಲು ಭರಿಸಬೇಕಾದ ಶುಲ್ಕವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ತಿಳಿಸಿದರು.

Advertisement

ಈ ಬಡಕುಟುಂಬಕ್ಕೆ ತಾತ್ಕಾಲಿಕ ಮನೆ ನಿರ್ಮಾಣ ಕಾರ್ಯ ನಡೆಸುತ್ತಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್‌ನ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗ್ರಾ.ಪಂ.ನಿಂದ ವಸತಿ ಯೋಜನೆಯಡಿ ಮನೆ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಉಪಾಧ್ಯಕ್ಷರಿಗೆ ವಿವರಿಸಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ದಯಾನಂದ ಶೆಟ್ಟಿ ಮುನ್ನಲಾಯಿ, ವಿಠ್ಠಲ ಅಲ್ಲಿಪಾದೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next