Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮನ್ವಯ ಸಮಿತಿ ಸಭೆಯಲ್ಲಿ ಯಡಿಯೂರಪ್ಪ ಅವರು ಬದಲಾದರೆ ಲಿಂಗಾಯತರನ್ನೇ ಸಿಎಂ ಮಾಡಬೇಕು ಎಂದು ಹೇಳಲು ನಿಮಗೆ ಅಧಿಕಾರ ಕೊಟ್ಟಿರುವುದು ಯಾರು. ಬಿಜೆಪಿಯಲ್ಲಿ ಒಂದು ವ್ಯವಸ್ಥೆ ಇದೆ. ಶಾಸಕಾಂಗ ಪಕ್ಷ ಇದೆ. ಯಾರನ್ನು ಸಿಎಂ ಮಾಡಬೇಕು ಎಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನವಾಗುತ್ತದೆ. ಬಿಜೆಪಿ ನಾಯಕತ್ವ ತೀರ್ಮಾನ ಮಾಡಲು ನೀವ್ಯಾರು. ಈ ರೀತಿ ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಬೇಡಿ ಎಂದು ಹೇಳಿದರು.
Related Articles
Advertisement
ಜಮೀರ್ ಅಹಮದ್ ಏನು ಎಂದು ಎಲ್ಲರಿಗೂ ಗೊತ್ತಿದೆ. ವಿಜಯೇಂದ್ರ ಪಕ್ಷದ ನಾಯಕರಾಗಿ ಕೆ.ಆರ್.ಪೇಟೆ ಮಾದರಿಯಲ್ಲಿ ಚುನಾವಣೆ ನಡೆಸಿದ್ದಾರೆ. ಜಮೀರ್ ತಾಕತ್ತಿದ್ದರೆ ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಜಯ ಗಳಿಸಿ ಬರಲಿ ನೋಡೋಣ ಎಂದು ಸವಾಲೆಸಿದರು.
ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಜಯಗಳಿಸುವ ವಿಶ್ವಾಸ ಇದೆ. ಶಿರಾ ಪಕ್ಷದ ಅಭ್ಯರ್ಥಿ ವಿದ್ಯಾವಂತರಿದ್ದಾರೆ. ಶಾಶ್ವತ ನೀರಾವರಿ ಯೋಜನೆ ನೀಡುವ ಭರವಸೆ ಕೊಟ್ಟಿದ್ದಾರೆ. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆಯುವ ನಾಯಕ. ಮುನಿರತ್ನಗೆ ಇಂಥದ್ದೆ ಖಾತೆ ಕೊಡುತ್ತೇನೆ ಎಂದು ಸಿಎಂ ಹೇಳಿಲ್ಲ. ನಿರ್ದಿಷ್ಟ ಮಂತ್ರಿಸ್ಥಾನ ಬೇಕೆಂದು ಆಸೆ ಇಟ್ಟುಕೊಂಡಿದ್ದರೆ ಆಗುವುದಿಲ್ಲ ಎಂದರು.
ಹುಬ್ಬಳ್ಳಿ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಪಾತ್ರ ಇದೆ. ಅದಕ್ಕೆ ಸಿಬಿಐ ತನಿಖೆ ನಡೆಸುತ್ತಿದೆ. ಇದರಲ್ಲಿ ಬಿಜೆಪಿ ಪಾತ್ರ ಏನೂ ಇಲ್ಲ. ಕಾಂಗ್ರೆಸ್ ನವರು ಸಿಬಿಐ ದುರುಪಯೋಗ ಪಡೆಸಿಕೊಂಡಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.