Advertisement

ಪಕ್ಷದ ಅಭ್ಯರ್ಥಿ ಗೆದ್ದ ಸಂಭ್ರಮಕ್ಕೆ ಡಾನ್ಸ್  ಮಾಡಿದ ಶಾಸಕಿ ರೂಪಾಲಿ ನಾಯ್ಕ್

05:49 PM Dec 14, 2021 | Team Udayavani |

ಕಾರವಾರ:  ಪಕ್ಷದ ಅಭ್ಯರ್ಥಿ ಗೆದ್ದ ಸಂಭ್ರಮಕ್ಕೆ ಕಾರವಾರ ಶಾಸಕಿ ರೂಪಾಲಿ ನಾಯ್ಕ್ ಡಾನ್ಸ್  ಮಾಡಿದ ಸಂತಸದ ಘಟನೆ ಕಾರವಾರದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

Advertisement

ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಬಿಜೆಪಿ ಕಾರ್ಯಕರ್ತರ ಸಂತಸಕ್ಕೆ ಕಾರಣವಾಗಿದೆ. ಕಾರವಾರ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್ ರ ಸಂಭ್ರಮವಂತೂ ಮುಗಿಲು ಮುಟ್ಟಿದೆ. ಉಳ್ವೇಕರ್ ಗೆಲುವು ಘೋಷಣೆಯಾಗುತ್ತಿದ್ದಂತೆ ನಗರಸಭೆಯ ಸದಸ್ಯರು, ಬಿಜೆಪಿ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರೊಂದಿಗೆ ಕಾರವಾರದ ಮಾಲಾದೇವಿ ಮೈದಾನದಲ್ಲಿ ಡಿಜೆ, ಡೊಳ್ಳಿನ ಶಬ್ದಕ್ಕೆ ಡ್ಯಾನ್ಸ್ ಮಾಡಿದ್ದಾರೆ.

ಇನ್ನು ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕಿ ರೂಪಾಲಿ, ಬಿಜೆಪಿಗೆ ಇದು ಐತಿಹಾಸಿಕ ಗೆಲುವಾಗಿದೆ. ರಾಜ್ಯ ಹಾಗೂ ಕೇಂದ್ರ, ಜಿಲ್ಲೆಯ ಎಲ್ಲಾ ಬಿಜೆಪಿ ನಾಯಕರು, ಕಾರ್ಯಕರ್ತರಿಂದ ಈ ಗೆಲುವಾಗಿದೆ. ರಾಜ್ಯದ ವಿಧಾನ ಪರಿಷತ್ ನಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಪ್ರಧಾನಿ ಮೋದಿಯವರ ಕಾರ್ಯ ಜನರಲ್ಲಿ ಬಿಜೆಪಿಯ ಮೇಲೆ ವಿಶ್ವಾಸ ಹುಟ್ಟಿಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next