Advertisement

ನ್ಯಾಮಗೌಡ ಅಂತ್ಯಕ್ರಿಯೆ

06:00 AM May 30, 2018 | |

ಜಮಖಂಡಿ: ಸೋಮವಾರ ಬೆಳಗ್ಗೆ  ಅಪಘಾತದಲ್ಲಿ ಮೃತಪಟ್ಟಿದ್ದ ಜಮಖಂಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವ ಹಾಗೂ ಲಿಂಗಾಯತ ವಿಧಿ ವಿಧಾನಗಳೊಂದಿಗೆ ಜಮಖಂಡಿ ತಾಲೂಕಿನ ಹಿರೇಪಡಸಲಗಿ-ನಾಗನೂರ ಬಳಿಯಿರುವ ಜಮಖಂಡಿ ಶುಗರ್ ಆವರಣದಲ್ಲಿ ಮಂಗಳವಾರ ಸಂಜೆ ನೆರವೇರಿತು.

Advertisement

ರಾಜ್ಯ ಸರಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್‌,  ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಂ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ವಂಶಿಕೃಷ್ಣ  ಗೌರವ ಸಲ್ಲಿಸಿದರು. ಅಲ್ಲದೆ ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಹಲವು ಶಾಸಕರು, ಸ್ವಾಮೀಜಿಗಳು, ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು.

Advertisement

Udayavani is now on Telegram. Click here to join our channel and stay updated with the latest news.

Next