ರಬಕವಿ-ಬನಹಟ್ಟಿ: ಸರ್ಕಾರಿ ಶಾಲೆಗಳಲ್ಲಿರುವ ಮೂಲ ಸೌಕರ್ಯಗಳ ಕೊರತೆ ಕುರಿತು ಶಾಸಕರ ಗಮನಕ್ಕೆ ತೆಗೆದುಕೊಂಡು ಬನ್ನಿ. ಅವುಗಳನ್ನು ಹಂತ ಹಂತವಾಗಿ ಪೂರೈಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ಸಿದ್ದು ಸವದಿ ತಿಳಿಸಿದರು.
ಅವರು ಬನಹಟಿಯ ಸರ್ಕಾರಿ ಪ್ರೌಢ ಶಾಲೆಯ ರೂ. 51 ಲಕ್ಷ ವೆಚ್ಚದಲ್ಲಿ ಮೂರು ವರ್ಗ ಕೋಣೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಅರ್ಹತೆಯುಳ್ಳ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಅದೇ ರೀತಿಯಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಅರ್ಹತೆಯ ಕೂಡಾ ಹೆಚ್ಚಾಗಬೇಕು. ನಮ್ಮ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವಂತೆ ಶಿಕ್ಷಣವನ್ನು ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚಿನ ಅಧ್ಯತೆಯನ್ನು ನೀಡಬೇಕು. ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವಂತೆ ಕ್ರಮ ತೆಗೆದುಕೊಳ್ಳಬೇಕು.
ಇಲ್ಲಿಯ ಪ್ರಾಥಮಿಕ ಶಾಲೆಯ ವರ್ಗ ಕೋಣೆಗಳು ಅತ್ಯಂತ ಶಿಥಿಲಗೊಂಡಿವೆ. ಅವುಗಳನ್ನು ಕೂಡಾ ಅಭಿವೃದ್ಧಿ ಮಾಡಲಾಗುವುದು. ಅದೇ ರೀತಿಯಾಗಿ ಶಾಲೆಗೆ ಕಂಪೌAಡ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಪ್ರೌಢ ಶಾಲೆಯ ಉಪ ಪ್ರಾಚಾರ್ಯ ರವಿ ಬಸಗೊಂಡನವರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಡಾ.ಅಕ್ಬರ್ ತಾಂಬೋಳಿ, ಶ್ರೀಶೈಲ ಬೀಳಗಿ, ಗೌರಿ ಮಿಳ್ಳಿ, ದುರ್ಗವ್ವ ಹರಿಜನ, ಜಯಶ್ರೀ ಬಾಗೇವಾಡಿ ಸೇರಿದಂತೆ ಅನೇಕರು ಇದ್ದರು.
ಕಾರ್ಯಕ್ರಮದಲ್ಲಿ ಪ್ರವೀಣ ಧಬಾಡಿ, ಭೀಮಶಿ ಪಾಟೀಲ, ಮಲಕಪ್ಪ ಬಿರಾದಾರಪಾಟೀಲ, ಶ್ರೀಶೈಲ ಬಿರಾದಾರ, ಶಿವಾನಂದ ಚಿಂಚಖಂಡಿ, ರವೀಂದ್ರ ಸಂಪಗಾವಿ, ಯಾಸಿನ್ ತಾಂಬೋಳಿ, ಎಸ್.ಬಿ.ಬೆಳ್ಳಿಕಟ್ಟಿ ಸೇರಿದಂತೆ ಅನೇಕರು ಇದ್ದರು.