Advertisement

ಗುರುವಾರ ಸಚಿವನಾಗಲಿದ್ದೇನೆ: ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್

09:58 AM Feb 04, 2020 | keerthan |

ಚಿಕ್ಕಬಳ್ಳಾಪುರ: ಮುಂದಿನ ಗುರುವಾರ ನಾನು ರಾಜ್ಯದ ಸಚಿವನಾಗಲಿದ್ದೇನೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ನೂತನ ಬಿಜೆಪಿ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.

Advertisement

ಸೋಮವಾರ ಚಿಕ್ಕಬಳ್ಳಾಪುರ ನಗರದ ಪತ್ರಕರ್ತ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಸ್ಥಳೀಯ ನಗರಸಭೆಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಬಳಿಕ ಮಾತನಾಡಿದರು.

ಸಚಿವ ಸಂಪುಟದ ಬಗ್ಗೆ ಮಾತನಾಡಿದ ಸುಧಾಕರ್, “ಖುದ್ದು ನನಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಚಾರ ನನಗೆ ತಿಳಿಸಿದ್ದಾರೆ” ಎಂದರು.

ಬಿ ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರಕಾರ ಮುಂದಿನ ಗುರುವಾರ (ಫೆಬ್ರವರಿ 6)ರಂದು ಸಚಿವ ಸಂಪುಟ ವಿಸ್ತರಿಸಲಿದೆ. ಬೇರೆ ಪಕ್ಷಗಳಿಂದ ಬಿಜೆಪಿಗೆ ಬಂದು ಉಪಚುನಾವಣೆಯಲ್ಲಿ ಗೆದ್ದಿರುವ ಶಾಸಕರಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಹೀಗಾಗಿ ಸುಧಾಕರ್ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next