Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಲಲಿತ ಕಲೆಗಳಿಗೆ ಉತ್ತಮ ಪ್ರೋತ್ಸಾಹ:ಶಾಸಕ ಸುನಿಲ್ ನಾಯ್ಕ್

07:35 PM Dec 28, 2021 | Team Udayavani |

ಭಟ್ಕಳ: ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕಲೆಗೆ ಉತ್ತಮ ಪ್ರೋತ್ಸಾಹ ನೀಡುತ್ತಿದೆ ಎಂದು ಶಾಸಕ ಸುನಿಲ್ ನಾಯ್ಕ್ ಹೇಳಿದರು.

Advertisement

ಅವರು  ಶಿರಾಲಿಯ ಶ್ರೀ ಮಾರುತಿ ದೇವಸ್ಥಾನದ ಸಭಾಗ್ರಹದಲ್ಲಿ ಕಾರವಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ಚಿಗುರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಚಿಗುರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರಾಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ನಾಯ್ಕ ವಹಿಸಿದ್ದರು.

ಚಿಗುರು ಕಾರ್ಯಕ್ರಮದ ಸಂಯೋಜಕರಾದ ಝೇಂಕಾರ್ ಸಂಸ್ಥೆಯ ಅಧ್ಯಕ್ಷ ಪ್ರಸನ್ನ ಪ್ರಭು ಮಾತನಾಡಿ ಕಲಾಕುಸುಮಗಳು ಅರಳಬೇಕಾದರೆ ಪಾಲಕರ ಪ್ರೋತ್ಸಾಹ, ಪ್ರತಿಯೋರ್ವ ಪಾಲಕರು ಸಹ ತಮ್ಮ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ಶಿಕ್ಷಣ ನೀಡಬೇಕು ಎಂದರು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಉಧ್ಯಮಿ ಡಿ.ಜೆ. ಕಾಮತ್ ಅವರು ಮಕ್ಕಳು ತಮ್ಮ ಸಮಯವನ್ನು ಶಾಲಾ ಶಿಕ್ಷಣಕ್ಕೆ ಮಾತ್ರ ಮೀಸಲಾಗಿರಿಸದೇ ಜೀವನ ಮೌಲ್ಯವನ್ನು ಸಾರುವ ಇನ್ನಿತರ ಕಲಾತ್ಮಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

Advertisement

ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕ ಎನ್. ಜಿ. ನಾಯಕ ಪ್ರತಿಯೋರ್ವರೂ ಕೂಡಾ ಕಲೆಗೆ ಪ್ರೋತ್ಸಾಹ ನೀಡಬೇಕು. ಕಲೆಯನ್ನು ಬೆಳೆಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದೂ ಹೇಳಿದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ವಿವಿಧ ಕಲಾ ತಂಡದಿಂದ ಶಾಸ್ತ್ರೀಯ ನೃತ್ಯ ರೂಪಕ, ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಏಕಪಾತ್ರಾಭಿನಯ, ಜಾನಪದ ಗೀತೆಗಳು ಜನಮೆಚ್ಚುಗೆ ಪಡೆದವು.

ಕಲಾ ಶಿಕ್ಷಕ ಸಂಜಯ ಗುಡಿಗಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next