Advertisement

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

10:58 PM Jul 06, 2024 | Team Udayavani |

ಮೈಸೂರು: ವಿಚಾರಣೆ ನೆಪದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡತಗಳನ್ನು ಹಿರಿಯ ಅಧಿಕಾರಿಗಳು ಕದ್ದೊಯ್ದಿದ್ದಾರೆ ಎಂದು ಶಾಸಕ ಟಿ.ಎಸ್‌. ಶ್ರೀವತ್ಸ ಆರೋಪಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಹಗರಣ ಬೆಳಕಿಗೆ ಬರುತ್ತಿದ್ದಂತೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ತಂಡ ಏಕಾಏಕಿ ಮೈಸೂರಿಗೆ ಆಗಮಿಸಿ, ದಿನವಿಡೀ ಮುಡಾ ಅಧಿಕಾರಿಗಳನ್ನು ವಿಚಾರಣೆ ನಡೆಸಿ, 140ಕ್ಕೂ ಹೆಚ್ಚು ಕಡತಗಳನ್ನು ಕದ್ದೊಯ್ದಿದ್ದಾರೆ. ಆ ಕಡತಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಜತೆಗೆ ಕೆಲವು ದಾಖಲೆಗಳನ್ನು ನಾಶ ಪಡಿಸಲಾಗುತ್ತಿದೆ. ಇದು ಸರಕಾರದಿಂದಲೇ ನಡೆಯುತ್ತಿದೆ ಎಂದು ಆರೋಪಿಸಿದರು.

ಮೊದಲ ದಿನ 140 ಕಡತಗಳನ್ನು ತೆಗೆದುಕೊಂಡು ಹೋಗಿದ್ದೇವೆ ಎಂದು ಅಧಿಕಾರಿಗಳೇ ಹೇಳಿದ್ದರು. ಅನಂತರ 40 ಕಡತಗಳನ್ನಷ್ಟೇ ತೆಗೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಬರುತ್ತಿದೆ ಎಂದರು.

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ಇದೀಗ ರಾಜ್ಯಪಾಲರ ಅಂಗಳಕ್ಕೆ ತಲುಪುವ ಸಾಧ್ಯತೆ ಹೆಚ್ಚಾಗಿದೆ. ಹಗರಣದ ವಿಚಾರದಲ್ಲಿ ರಾಜ್ಯ ಸರಕಾರ ಸೂಕ್ತ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಹಗರಣದ ಕುರಿತು ರಾಜ್ಯಪಾಲರು ಹಾಗೂ ಹೈಕೋರ್ಟ್‌ ನ್ಯಾಯಾಧೀಶರಿಗೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂದು ಶ್ರೀವತ್ಸ ತಿಳಿಸಿದರು.

ಯಾರನ್ನೋ ಬಚಾವ್‌ ಮಾಡಲು ಸಿಎಂ ಬುಡಕ್ಕೆ ತಂದುಕೊಳ್ಳುತ್ತಿದ್ದಾರೆ:

Advertisement

ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಯಾರನ್ನೋ ರಕ್ಷಣೆ ಮಾಡಲು ಹೋಗಿ ಬುಡಕ್ಕೆ ತಂದುಕೊಳ್ಳುತ್ತಿದ್ದಾರೆ. ಅವರನ್ನು ಮುಂದಿಟ್ಟುಕೊಂಡು ಬೇರೆಯವರು ಪಾರಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಶ್ರೀವತ್ಸ ಆರೋಪಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಇಷ್ಟೆಲ್ಲ ಹಗರಣ ಆಗಿರುವ ಬಗ್ಗೆ ಮಾಹಿತಿ ಇದ್ದರೂ ಮುಡಾ ಆಯುಕ್ತರಾಗಿದ್ದ ಜಿ.ಟಿ. ದಿನೇಶ್‌ ಕುಮಾರ್‌ ಅವರನ್ನು ಏಕೆ ಅಮಾನತು ಮಾಡಿಲ್ಲ. ಅವರ ವಿರುದ್ಧ ಏಕೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ 3.16 ಎಕರೆ ಭೂಮಿಗೆ 64 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ಆದರೆ ಎಕರೆಗೆ 20 ಕೋಟಿ ರೂ. ಬೆಲೆ ಬಾಳುವ ಭೂಮಿ ಮೈಸೂರಿನಲ್ಲಿ ಎಲ್ಲಿದೆ ಎಂದು ಪ್ರಶ್ನಿಸಿದ ಅವರು, ನಿಮ್ಮ ಪತ್ನಿ ದೇವನೂರು ಬಡಾವಣೆಯಲ್ಲಿ ಭೂಮಿ ಕಳೆದುಕೊಂಡಿದ್ದಕ್ಕೆ ವಿಜಯನಗರದಲ್ಲಿ ನಿವೇಶನ ಪಡೆದಿದ್ದಾರೆ. ಸಿಎಂ ಪತ್ನಿ ಭೂಮಿ ಕಳೆದುಕೊಂಡ ಪಕ್ಕದಲ್ಲೇ ಮತ್ತೂಬ್ಬರು 7 ಎಕರೆ ಕಳೆದುಕೊಂಡಿದ್ದಾರೆ. ಹಾಗಾದರೇ ಅವರಿಗೆ 150 ಕೋಟಿ ರೂ. ಕೊಡಲು ಮುಡಾದಿಂದ ಸಾಧ್ಯವೇ? ದೇವನೂರು ಬಡಾವಣೆ 20 ಕೋಟಿ ರೂ. ಬೆಲೆ ಬಾಳುತ್ತದೆಯೇ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next