Advertisement

ಶಾಸಕ ಖಾದರ್‌ ವಿರುದ್ಧ ಕ್ರಮಕ್ಕೆ ದೂರು

11:00 PM Dec 24, 2019 | Team Udayavani |

ಬಂಟ್ವಾಳ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯಕ್ಕೆ ಬೆಂಕಿ ಹಚ್ಚುವ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದ ಶಾಂತಿ ಕೆಡಿಸಿರುವ ಶಾಸಕ ಯು.ಟಿ.ಖಾದರ್‌ರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಂಟ್ವಾಳ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದೆ.

Advertisement

ಶಾಸಕರ ಹೇಳಿಕೆಯಿಂದಾಗಿ ಕಿಡಿಗೇಡಿಗಳು ಪ್ರತಿಭಟನೆ ನೆಪದಲ್ಲಿ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ. ಪೊಲೀಸ್‌ ಇಲಾಖೆಗೂ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಅಪಾರ ಪ್ರಮಾಣದಲ್ಲಿ ಸಾರ್ವಜನಿಕ ಸೊತ್ತುಗಳಿಗೆ ಹಾನಿಯಾಗಿದೆ. ಹೀಗಾಗಿ ಶಾಸಕ ಯು.ಟಿ.ಖಾದರ್‌ರನ್ನು ಬಂಧಿಸಿ, ಗಲಭೆಗೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಜತೆಗೆ ಗಲಭೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ 10 ಲಕ್ಷ ರೂ.ಪರಿಹಾರ ಘೋಷಣೆ ಮಾಡಿ ರುವುದು ಸರಿಯಲ್ಲ. ಇದರ ಪುನರ್‌ ವಿಮರ್ಶೆ ನಡೆಸಬೇಕು ಎಂದೂ ವೇದಿಕೆ ಒತ್ತಾಯಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next