Advertisement
ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಸ್ಥಳ ವೀಕ್ಷಣೆ ಮಾಡಿ ಮಾತನಾಡಿದ ಶಾಸಕ ಕಾಮತ್, ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಪಿ ಎಸ್ ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಅಳವಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಾಳೆಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಲಿದೆ ಎಂದಿದ್ದಾರೆ.
Related Articles
Advertisement
ಇನ್ನು, ಆಕ್ಸಿಜನ್ ಉತ್ಪಾದನಾ ಘಟಕವನ್ನು ವೆನ್ಲಾಕ್ ಆಸ್ಪತ್ರೆಗೆ ನೀಡಿದ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವರಾದ ಡಾ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್,ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಅಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್,ಬಿಜೆಪಿ ಜಿಲ್ಲಾ ವಕ್ತಾರರಾದ ಜಗದೀಶ್ ಶೇಣವ, ಮುಖಂಡರಾದ ಸಚಿನ್ ರಾಜ್ ರೈ, ಮೋಹನ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಜಾಗ್ವಾರ್ ಲ್ಯಾಂಡ್ ರೋವರ್ : ಆ್ಯಂಟಿ ವೈರಸ್ ತಂತ್ರಜ್ಞಾನ ಕೋವಿಡ್ ವಿರುದ್ಧ ಪರಿಣಾಮಕಾರಿ !