Advertisement

ಕಾಲಕಾಲಕ್ಕೆ ಪ್ರಕರಣ ಇತ್ಯರ್ಥ

06:54 PM Mar 21, 2021 | Team Udayavani |

ದೊಡ್ಡಬಳ್ಳಾಪುರ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ವರ್ಷಗಳಿಂದ ಬಾಕಿ ಇರುವ ಪ್ರಕರಣಗಳು ಬಹುಮಟ್ಟಿಗೆ ಕಡಿಮೆಯಾಗಿದ್ದು, ಜನಪ್ರತಿನಿಧಿಗಳು ಅಧಿ ಕಾರಿ ಗಳ ಸಹಕಾರದೊಂದಿಗೆ ಕಾಲಕಾಲಕ್ಕೆ ಇತ್ಯರ್ಥಪಡಿಸಲಾಗುತ್ತಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

Advertisement

ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಕಾರೇಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮದ ಪ್ರಯುಕ್ತ ತಹಶೀಲ್ದಾರ್‌ ಹಾಗೂ ಕಂದಾಯ ಅಧಿಕಾರಿ ಗಳೊಂದಿಗೆ ನಡೆದ ಗ್ರಾಮವಾಸ್ತವ್ಯ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಪಡಿ ತರ ಚೀಟಿ, ಖಾತೆ ಬದಲಾವಣೆ, ಪಹಣಿ ತಿದ್ದು ಪಡಿ, ಪೋಡಿ, ಉಳುಮೆ ಚೀಟಿ, ಹಕ್ಕು ಪತ್ರಗಳ ವಿತರಣೆ ಮಾಡಲು ಈ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ತಂದಿದೆ. ಕಳೆದ ತಿಂಗಳು ನಮ್ಮ ತಾಲೂಕಿನ ಹೊಸಹಳ್ಳಿ ಗ್ರಾಮ ದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಅಶೋಕ್‌ ಚಾಲನೆ ನೀಡಿ ಯಶಸ್ವಿಯಾಗಿತ್ತು ಎಂದರು.

ಅಗತ್ಯ ಸಹಕಾರ: ಇದೇ ಮಾದರಿಯಲ್ಲಿ ಅದಾಲತ್‌ ಕಾರ್ಯಕ್ರಮಗಳನ್ನು ಈ ಹಿಂದೆ ಹಮ್ಮಿಕೊಂಡಿದ್ದ ಫಲವಾಗಿ ತಾಲೂಕಿನಲ್ಲಿ 29 ಸಾವಿರ ಇದ್ದ ವೃದ್ಧಾಪ್ಯ ವೇತನ 49 ಸಾವಿರ ವಾಗಿದೆ. 39 ಸಾವಿರ ಪಡಿತರ ಚೀಟಿಗಳು 79 ಸಾವಿರವಾಗಿವೆ. ವಸತಿ ಯೋಜನೆಯಡಿಯಲ್ಲಿ 32 ಸಾವಿರ ಮನೆಗಳು ಮಂಜೂರಾಗಿದೆ. ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳಿಂದಲೂ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಮಾತ ನಾಡಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಗ್ರಾಮಸ್ಥರ ಸಮಸ್ಯೆ ಆಲಿಸ ಲಾಗುತ್ತಿದ್ದು, ಸ್ಥಳದಲ್ಲೇ ಪರಿಹರಿಸ ಲಾಗುತ್ತಿದೆ. ಕಳೆದ ತಿಂಗಳು ನಡೆದ ಜಿಲ್ಲಾಧಿ ಕಾರಿ ಗಳ ನಡೆ- ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ತಾಲೂ ಕಿನಲ್ಲಿ 688 ವಿವಿಧ ಸಾಮಾಜಿಕ ಯೋಜನೆ ಗಳ ಫಲಾನುಭವಿಗಳಿಗೆ ಮಂಜೂರಾತಿ ಹಾಗೂ ಕಂದಾಯ ಸಮಸ್ಯೆ ಅರ್ಜಿ ಗಳನ್ನು ವಿಲೇವಾರಿ ಮಾಡಲಾಗಿತ್ತು ಎಂದರು. ತಾಪಂ ಅಧ್ಯಕ್ಷ ನಾರಾಯಣಗೌಡ, ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್‌, ಇಒ ಮುರುಡಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ, ಸಿಡಿಪಿಒ ಎಸ್‌.ಅನಿತಾಲಕ್ಷಿ ¾à ಹಾಗೂ ಕಂದಾಯ ಇಲಾಖೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next