Advertisement

“ಕಾರ್ಯಕರ್ತರ ಅಹವಾಲುಗಳಿಗೆ ಪ್ರಥಮ ಆದ್ಯತೆ ‘

07:40 AM Jul 25, 2017 | Team Udayavani |

ಶಿರ್ವ: ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮದ ಬೂತ್‌ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾರ್ಯಕರ್ತರ ಅಹವಾಲುಗಳಿಗೆ ಪ್ರಥಮ ಆದ್ಯತೆ ನೀಡಿ ಬೂತ್‌ ಮಟ್ಟದಲ್ಲಿ ಸಮಿತಿ ರಚಿಸಿ ಪದಾಧಿಕಾರಿಗಳನ್ನು ನೇಮಿಸುವುದರ ಮೂಲಕ ಗ್ರಾಮದ ಅಭಿವೃದ್ಧಿಯೊಂದಿಗೆ ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ ಮಾಜಿ ಉಸ್ತುವಾರಿ ಸಚಿವ /ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಹೇಳಿದರು.

Advertisement

ಅವರು ಸೋಮವಾರ ಶಿರ್ವ ಸ್ಥಾನೀಯ ಕಾಂಗ್ರೆಸ್‌ ಸಮಿತಿ ವತಿಯಿಂದ ನಡೆದ ಗ್ರಾಮೀಣ ಕಾಂಗ್ರೆಸ್‌ ಸಮಿತಿ ವಾರ್ಡ್‌ ಕಾರ್ಯಕರ್ತರ ಸಭೆಯನ್ನುದೇªಶಿಸಿ ಮಾತನಾಡುತ್ತಿದ್ದರು.ಕಾಂಗ್ರೆಸ್‌ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿ ಮತದಾರರಿಗೆ ಒತ್ತಡ ತರುವ ಮೂಲಕ ವಿರೋಧ ಪಕ್ಷಗಳು ಮತಗಿಟ್ಟಿಸುವ ಪ್ರಯತ್ನ ಮಾಡುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ 18 ಕೋ.ರೂ.ಗಳನ್ನು ಪಂಚಾಯತ್‌ ಮಟ್ಟದಲ್ಲಿ ಮಂಜೂರಾತಿ ಮಾಡಲಾಗಿದೆ. ಗ್ರಾಮದ ಸಮಸ್ಯೆ ಅರ್ಥೈಸಿಕೊಂಡು ಬೇರೆ ಬೇರೆ ಅನುದಾನಗಳ ಮೂಲಕ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಗ್ರಾಮದ ಅಭಿವೃದ್ಧಿಯ ಆಧಾರದ ಮೇಲೆ ಚುನಾವಣೆಯನ್ನು ಎದುರಿಸುತೇ¤ವೆ ಎಂದು ಹೇಳಿದರು.

ಗ್ರಾಮದ ಸಮಸ್ಯೆಗಳಾದ ವಿದ್ಯುತ್‌ ಸಮಸ್ಯೆ, ಇಂಟರ್ನೆಟ್‌ ಮತ್ತು ದೂರವಾಣಿ ಸಮಸ್ಯೆಗಳ ಬಗ್ಗೆ ಕಾರ್ಯಕರ್ತರ ಅಹವಾಲುಗಳಿಗೆ ಸ್ಪಂದಿಸಿದ ಶಾಸಕರು ಸಮಸ್ಯೆ ಪರಿಹರಿಸಿಕೊಡುವ ಭರವಸೆ ನೀಡಿದರು. ರಾಜ್ಯ ಕಾಂಗ್ರೆಸ್‌ನ ಕಾರ್ಯದರ್ಶಿ ಅಬ್ದುಲ್‌ ಅಜೀಜ್‌, ಪಕ್ಷದ ಹಿಂದುಳಿದ ಮೋರ್ಚಾದ ಅಧ್ಯಕ್ಷ ದೀಪಕ್‌ ಕುಮಾರ್‌ ಎರ್ಮಾಳ್‌, ಅಲ್ಪಸಂಖ್ಯಕ ಅಬಿವೃದ್ಧಿ ನಿಗಮದ ಅಧ್ಯಕ್ಷ ಪ್ರಶಾಂತ್‌ ಜತ್ತನ್ನ,ಜಿಲ್ಲಾ ಕೆಡಿಪಿ ಸದಸ್ಯ ಇಗೇ°ಶಿಯಸ್‌ ಡಿ‡ ಸೋಜ, ಶಿರ್ವ ಸ್ಥಾನೀಯ ಸಮಿತಿ ಅಧ್ಯಕ್ಷ ಸುಧೀರ್‌ ಶೆಟ್ಟಿ , ಗ್ರಾ.ಪಂ.ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಜಿ.ಪಂ.ಸದಸ್ಯ ವಿಲ್ಸನ್‌ ರೊಡ್ರಿಗಸ್‌ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬ್ಲಾಕ್‌ಯುವ ಕಾಂಗ್ರೆಸ್‌ ಅಧ್ಯಕ್ಷ/ ಗ್ರಾ.ಪಂ.ಸದಸ್ಯ ಮೆಲ್ವಿನ್‌ ಡಿಸೋಜಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next