Advertisement

ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪತ್ರ ಬರೆದು ಹುರಿದುಂಬಿಸಿದ ಶಾಸಕ

06:12 PM Jul 08, 2021 | Team Udayavani |

ಗೋಕಾಕ: ಕೊರೋನಾ, ಲಾಕ್‌ಡೌನ್‌ ಹಾಗೂ ವೈಯಕ್ತಿಕ ಕಾರ್ಯಗಳ ಒತ್ತಡಗಳ ಮಧ್ಯೆಯೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಶೈಕ್ಷಣಿಕ ವಲಯದ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗೆ ಹಾಗೂ ಪ್ರೌಢಶಾಲೆಯ ಸಹ ಶಿಕ್ಷಕರಿಗೆಲ್ಲ ಪತ್ರ ಬರೆದು ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ.

Advertisement

ಈಗಾಗಲೇ ತಮ್ಮ ವಲಯದ 5 ಸರಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿಯವರ ಈ ಪತ್ರ ಅಭಿಯಾನ ವಿದ್ಯಾರ್ಥಿ, ಶಿಕ್ಷಕ ಹಾಗೂ ಪಾಲಕರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಜುಲೆ„ 19 ಮತ್ತು 22 ರಂದು ಎಸ್‌.ಎಸ್‌.ಎಲ್‌ .ಸಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ತಯಾರಾಗುವ ದೃಷ್ಟಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರು 5 ಸಾವಿರ ವಿದ್ಯಾರ್ಥಿಗಳಿಗೆ ಪತ್ರ ಕಳುಹಿಸಿ ಓದಿನ ಕಡೆ ಗಮನ ಹರಿಸುವಂತೆ ಪ್ರೇರೇಪಿಸಿದ್ದಾರೆ.

ಕೋವಿಡ್‌ 1 ಮತ್ತು 2ನೇ ಅಲೆಯಿಂದ ಮನೆಯಲ್ಲಿ ಕುಳಿತು ಆನ್‌ಲೈನ್‌ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಹಾಗೂ ಪಾಠ ಮಾಡುತ್ತಿರುವ ಶಿಕ್ಷಕರು ಖನ್ನತೆಗೆ ಒಳಗಾಗಬಾರದು. ಪಾಲಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಒಳ್ಳೆಯ ವಾತಾವರಣ ಸೃಷ್ಟಿಸಬೇಕು ಎಂಬ ಮಹತ್ತರ ಉದ್ದೇಶದಿಂದ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪತ್ರದಿಂದ ಬಾಂಧವ್ಯ ಬೆಸುಗೆ ಎಂಬ ಕಲ್ಪನೆಯೊಂದಿಗೆ ಈ ವಿನೂತನ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಶಿಕ್ಷಣಾಧಿಕಾರಿ ಜಿ.ಬಿ ಬಳಗಾರ, ಕೊರೋನಾದಿಂದ ಭಯಭೀತರಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದು ಹೇಗೆ ಎಂದು ಯೋಚಿಸುತ್ತಿರುವ ಸಮಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಪತ್ರ ವಿದ್ಯಾರ್ಥಿಗಳಲ್ಲಿ ಓದಿನ ಆಸಕ್ತಿ ಹೆಚ್ಚಿಸಿದ್ದು ತುಂಬಾ ಖುಷಿ ತಂದಿದೆ. ಶೈಕ್ಷಣಿಕವಾಗಿ ಸದಾ ನಮಗೆ ಮಾರ್ಗದರ್ಶನ ನೀಡುತ್ತಿರುವ ಶಾಸಕರ ಈ ಪತ್ರ ಅಭಿಯಾನ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬಗ್ಗೆ ಇರುವ ಭಯವನ್ನು ನಿವಾರಿಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next