ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಯತೀಂದ್ರ ಅವರೇ ತನ್ನ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೋವಿಡ್-19 ಪರೀಕ್ಷೆಯಲ್ಲಿ ನನಗೂ ಸೋಂಕು ತಾಗಿರುವುದು ದೃಢವಾಗಿದೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ನಲ್ಲಿದ್ದು, ಮುಂಜಾಗ್ರತೆ ವಹಿಸಬೇಕು ಎಂದು ಯತೀಂದ್ರ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಕಳೆದ ಕೆಲವು ದನಗಳ ಹಿಂದೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿತ್ತು. ಅವರಿಗೆ ಜ್ವರ ಕಂಡುಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಪರೀಕ್ಷೆ ನಡೆಸಿದ ವೇಳೆ ಸೋಂಕು ಪತ್ತೆಯಾಗಿತ್ತು. ಸದ್ಯ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.