ಮೈಸೂರು: ಬಿ.ವೈ.ವಿಜಯೇಂದ್ರರ ಎಲ್ಲಾ ಡೀಲ್‌ಗಳು ನಡೆಯುದು ಸಿಎಂ ನಿವಾಸ ಕಾವೇರಿ ಹಿಂಭಾಗದ ಗೆಸ್ಟ್ ಗೌಸ್ ನಲ್ಲಿ. ಸಿಸಿಬಿ ಪೊಲೀಸರು ಅಲ್ಲೂ ದಾಳಿ ನಡೆಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಪುತ್ರ ವಿಜಯೇಂದ್ರ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಯತ್ನಾಳ್‌ಗೆ ಮಾಹಿತಿ ನೀಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೂ ಪ್ರತಿಕ್ರಿಯೆ ನೀಡಿದರು.
ಇದನ್ನೂಓದಿ:ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ: ಯತ್ನಾಳ್ ಟೀಕೆ
ಒಂದು ವೇಳೆ ಇದು ನಿಜವಾಗಿದ್ದರೆ ಕಾಂಗ್ರೆಸ್ ನವರೇನು ಕತ್ತೆ ಕಾಯುತ್ತಿದ್ದಾರೆಯೇ? ಭ್ರಷ್ಟರ ಜೊತೆ ವಿಪಕ್ಷಗಳು ಕೈ ಜೋಡಿಸಿವೆ. ಶೋಭ ಡೆವಲಪರ್ಸ್ ನಲ್ಲಿ ಯಾರು ಯಾರು ಪಾಲುದಾರರು ಮಾದ್ಯಮಗಳು ತನಿಖೆ ಮಾಡಬೇಕು. ರಾಜ್ಯದಲ್ಲಿ ವಿರೋಧ ಪಕ್ಷಗಳು ಸತ್ತು ಹೋಗಿವೆ. ಬಿ ಎಸ್ ಯಡಿಯೂರಪ್ಪ ಜೊತೆ ಎಲ್ಲರೂ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.
ವಿಪಕ್ಷದವರಿಗೂ ಭ್ರಷ್ಟಾಚಾರದಲ್ಲಿ ಪಾಲಿದೆ. ಈಗಾಗಿ ಅವರು ಯಾರು ಯಡಿಯೂರಪ್ಪ ವಿರುದ್ದ ಮಾತಾನಾಡುತ್ತಿಲ್ಲ. ಅವರಿಗೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ದ ಯತ್ನಾಳ್ ವಾಗ್ದಾಳಿ ನಡೆಸಿದರು.
ಆಗಸ್ಟ್ 15 ನೂತನ ಸಿಎಂ ಧ್ವಜಾರೋಹಣ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಅಲ್ಲಿವರೆಗೂ ಯಾಕೆ ಮುಂದುವರೆಸಬೇಕು. ಶೀಘ್ರದಲ್ಲೇ ಮುಖ್ಯಮಂತ್ರಿ ಬದಲಾವಣೆ ಮಾಡಬೇಕು. ದಿನಕ್ಕೆ ನೂರು ಕೋಟಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.