Advertisement

ಇಮ್ರಾನ್ ಪಾಶಾ ವಿರುದ್ಧ ಸೂಕ್ತ ಕ್ರಮಕ್ಕೆ ಜಮೀರ್ ಆಗ್ರಹ

08:08 PM Jun 07, 2020 | Hari Prasad |

ಬೆಂಗಳೂರು: ಕೊವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲುಗೊಂಡಿದ್ದ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಇದೀಗ ಇನ್ನೊಂದು ವಿವಾದಕ್ಕೆ ಕಾರಣರಾಗಿದ್ದಾರೆ.

Advertisement

ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಸಂದರ್ಭದಲ್ಲಿ ಪಾಷಾ ಅವರ ತನ್ನ ಬೆಂಬಲಿಗರೊಂದಿಗೆ ವಿಜಯೋತ್ಸವ ನಡೆಸಿರುವುದು ಇದೀಗ ರಾಜ್ಯಾದ್ಯಂತ ತೀವ್ರ ಖಂಡೆನೆಗೆ ಗುರಿಯಾಗಿದೆ.

ಇಮ್ರಾನ್ ಪಾಷಾ ಅವರ ಈ ನಡವಳಿಕೆಯನ್ನು ಶಾಸಕ ಜಮೀರ್ ಅಹಮ್ಮದ್ ಖಾನ್ ಅವರೂ ಸಹ ತೀವ್ರವಾಗಿ ಖಂಡಿಸಿದ್ದಾರೆ.

ಟ್ವೀಟ್ ಮೂಲಕ ಪಾಷಾ ಅವರ ಬೇಜವಾಬ್ದಾರಿತನ ವರ್ತನೆಯನ್ನು ಖಂಡಿಸಿರುವ ಜಮೀರ್ ಅಹಮ್ಮದ್ ಖಾನ್ ಅವರು, ಪಾಷಾ ಅವರ ಮೇಲೆ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next