Advertisement

ಮಹಮ್ಮದ್ ಪೈಗಂಬರರನ್ನು ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ನೋವಾಗಿದೆ: ಜಮೀರ್ ಅಹಮದ್

12:59 PM Aug 13, 2020 | keerthan |

ಬೆಂಗಳೂರು: ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಗೋಲಿಬಾರ್‌ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದಿದ್ದಾರೆ.

ಇದನ್ನೂ ಓದಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಆಗಸ್ಟ್ 15ರವರೆಗೂ ಸೆಕ್ಷನ್ 144 ಜಾರಿ

ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಜಮೀರ್ ಅಹಮದ್ ತನ್ನ ಟ್ವೀಟ್ ನಲ್ಲಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next