Advertisement

ಬಿಎಸ್‌ವೈ ಬಳಿ ಶಾಸಕರ ಅಳಲು

06:00 AM Dec 21, 2018 | |

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ ಸಮಸ್ಯೆ, ಕೃಷ್ಣಾ ಕೊಳ್ಳದ ಯೋಜನೆಗಳು ಸೇರಿದಂತೆ  ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಅಧಿವೇಶನದಲ್ಲಿ ಸೂಕ್ತ ಕಾಲಾವಕಾಶವೇ ಸಿಕ್ಕಿಲ್ಲ ಎಂದು ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ ಮುಂದೆ ಅಹವಾಲು ತೋಡಿಕೊಂಡರು.

Advertisement

ಬೆಳಗಾವಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕರ ವಿಶೇಷ ಸಭೆಯಲ್ಲಿ ಉತ್ತರ ಕರ್ನಾಟಕದ ಶಾಸಕರು ತಮ್ಮ ನೋವು ಹಾಗೂ ಇಲ್ಲಿನ ಜನರ ಸಮಸ್ಯೆಯನ್ನು ಬಿಡಿಬಿಡಿಯಾಗಿ ಹೇಳಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಸಮಗ್ರವಾಗಿ ಚರ್ಚೆ ಮಾಡಿಲ್ಲ. ಜತೆಗೆ ಆಡಳಿತ ಪಕ್ಷದಿಂದ ಯಾವ ಉತ್ತರವೂ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕಳಸಾಬಂಡೂರಿ ಯೋಜನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಧಿವೇಶನ ಬೆಳಗಾವಿಯಲ್ಲಿ ನಡೆದರೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಹರಿಸದೇ ಇರುವುದು ಎಷ್ಟು ಸರಿ, ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಸಭೆಯಲ್ಲಿ ಕೆಲವು ಶಾಸಕರ ಆಗ್ರಸಿದರು. ಮರಳಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಕೃಷ್ಣಾ ಕೊಳ್ಳದ ಯೋಜನೆಗಳು ನೆನಗುದಿಗೆ ಬಿದ್ದಿವೆ, ನೀರಾವರಿ ಯೋಜನೆಗಳು ಆರಂಭದಲೂ ಕುಂಟುತ್ತಾ ಸಾಗುತ್ತಿವೆ. ಈ ಬಗ್ಗೆ ಸರ್ಕಾರದ ಗಮನ ಹರಿಸುತ್ತಿಲ್ಲ. ಉತ್ತರ ಕರ್ನಾಟಕ ಜನತೆ ನಾನಾ ಸಮಸ್ಯೆಗಳಿಂದ ರೋಸಿ ಹೋಗಿದ್ದಾರೆ. ಅಧಿವೇಶನದಲ್ಲಿ ಅವರ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಕೊಂಡಿದ್ದೆವು. ಆಡಳಿತ ಯಂತ್ರವೇ ಸಮರ್ಪಕವಾಗಿ ನಡೆಯದೇ ಇರುವುದರಿಂದ ಎಲ್ಲವೂ ಹುಸಿಯಾಗುತ್ತಿದೆ ಎಂದು ಶಾಸಕರು ನೋವು ನೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬುಧವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬರದ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕರನ್ನು ಅಪಮಾನಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳು ಕ್ಷಮೆ ಕೇಳುವಂತೆ ಮಾಡಬೇಕು. ಹಾಗೆಯೇ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡುವ ನಿರ್ದಿಷ್ಟ ದಿನಾಂಕ ಘೋಷಣೆ ಮಾಡುವವರೆಗೂ ಸುಗಮ ಸದನದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಬಿಜೆಪಿ ಶಾಸಕರು ಸಭೆಯಲ್ಲೇ ನಿರ್ಧರಿಸಿದ್ದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next