Advertisement
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿದ ಶಾಸಕರ ಬಗ್ಗೆ ಹಿಂದಿನ ಸ್ಪೀಕರ್ ತೆಗೆದುಕೊಂಡ ನಿರ್ಧಾರದ ಬಗ್ಗೆ ನಮ್ಮ ಅಸಮಾಧಾನವಿದೆ. ಈ ತೀರ್ಪು ಸರಿಯಲ್ಲ ಎನ್ನುವುದು ಮೊದಲಿನಿಂದಲೂ ನಮ್ಮ ವಾದವಾಗಿತ್ತು ಎಂದರು.
ಸ್ಪೀಕರ್ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿರುವುದು ಸರಿಯಲ್ಲ. ನಮಗೂ ಏಕವಚನ, ಬಹುವಚನಗಳು ಗೊತ್ತು. ಆದರೆ ಸಿದ್ದರಾಮಯ್ಯ ವ್ಯಾಕರಣದ ಮೇಷ್ಟ್ರು. ಅವರಿಗೆ ಏಕವಚನ ಮಾತ್ರ ಗೊತ್ತಿದೆ. ವ್ಯಾಕರಣದ ವ್ಯತ್ಯಾಸ ಗೊತ್ತಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಸರಕಾರ ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರೈತರ ಹಿತ ಕಾಯುವುದು ನಮ್ಮ ಮೊದಲ ಆದ್ಯತೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕೇಂದ್ರ ಸರಕಾರಕ್ಕೆ ತಿಳಿಸುತ್ತೇವೆ. ರೈತರಿಗೆ ತೊಂದರೆಯಾಗದಂತೆ ಕೇಂದ್ರದ ಗಮನ ಸೆಳೆಯುತ್ತೇವೆ ಎಂದರು.
Related Articles
Advertisement