ಕೆ.ಆರ್.ಪುರ: “ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಶಾಸಕರು ಅಡ್ಡಿಪಡಿಸುತ್ತಿದ್ದಾರೆ,’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಪಾಲಿಕೆ ಸದಸ್ಯೆ ಕೆ.ಪೂರ್ಣಿಮಾ ಶ್ರೀನಿವಾಸ್ ಅರೋಪಿಸಿದರು.
ಲೇಕ್‌ಸಿಟಿ ಬಡಾವಣೆಯಲ್ಲಿ ಬಿಬಿಎಂಪಿ ಅನುದಾನದಡಿ 50 ಲಕ್ಷ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ಡಾಂಬರೀಕರಣ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, “ಸ್ಥಳೀಯ ಶಾಸಕ ಬೈರತಿ ಬಸವರಾಜ್, ಅಭಿವೃದ್ಧಿ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ.
ಬಡವರ ಆರೋಗ್ಯದ ದೃಷ್ಟಿಯಿಂದ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಲು ಮುಂದಾದಗ ಶಾಸಕರು ತಮ್ಮ ಬೆಂಬಲಿಗ ಮುಲಕ ಅಡ್ಡಪಡಿಸಿದ್ದಾರೆ,’ ಎಂದು ದೂರಿದರು.
“ಖಾಸಗಿ ಅಸ್ಪತ್ರೆಯಲ್ಲಿ ಒಮ್ಮೆ ಡಯಾಲಿಸಿಸ್ ಮಾಡಿಸಲು 7ರಿಂದ 8 ಸಾವಿರ ರೂ. ಖರ್ಚಾಗುತ್ತದೆ ಇಷ್ಟೊಂದು ಹಣಂ ನೀಡಿ ಡಯಾಲಿಸಿಸ್ ಮಾಡಿಸಲು ಬಡ ರೋಗಿಗಳಿಗೆ ಸಾಧ್ಯವಾಗುವುದಿಲ್ಲ. ಹೀಗಾಗಿ ಬಡವರಿಗೆ ಆಗುತ್ತಿರುವ ಆರ್ಥಿಕ ಹೊರೆ ತಪ್ಪಿಸಲು ಡಯಾಲಿಸಿಸ್ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ನ.23ರಂದು ಭೂಮಿ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಆದರೆ ಈ ವೇಳೆ ಅಧಿಕಾರ ಬಳಸಿಕೊಂಡಿರುವ ಶಾಸಕರು, ಕಟ್ಟಡ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಅರೋಗ್ಯ ಸಚಿವರಿಗೆ ದೂರು ನೀಡಿ, ಕಟ್ಟಡ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುವಂತೆ ಕೋರಲಾಗಿದೆ. ಮುಂದಿನ 10 ದಿನಗಳಲ್ಲಿ ಸಮಸ್ಯೆ ಸರಿಪಡಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ,’ ಎಂದರು.
“ಬಡ ಮತ್ತು ಹಿಂದುಳಿದವ ಪರ ಎಂದು ಹೇಳಿಕೊಳ್ಳುವ ಶಾಸಕರಿಗೆ ಅಡಳಿತದ ಪರಿಜ್ಞಾನವೇ ಇಲ್ಲ,’ ಎಂದು ಟೀಕಿಸಿದ ಪೂರ್ಣಿಮಾ ಅವರು, ಸಚಿವರು ನೀಡಿರುವ ಗಡುವಿನ ಒಳಗಾಗಿ ಸಕಾರಾತ್ಮಕ ಸ್ಪಂದನೆ ದೊರೆಯದಿದ್ದರೆ ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ,’ ಎಂದು ಹೇಳಿದರು. ಈ ವೇಳೆ ಪಾಲಿಕೆ ಮಾಜಿ ಸದಸ್ಯ ವೀರಣ್ಣ, ಸು¸Åಮಣಿ, ರಮೇಶ್, ಬಾಬು, ಜಿ.ವಿ.ಸೋಮಶೇಖರ್, ಜೆ.ವಿ.ಅನುರಾಧಾ ಮತ್ತಿತರರು ಉಪಸ್ಥಿತರಿದ್ದರು.