Advertisement

ರಾಹುಲ್‌ ಭೇಟಿ ಮಾಡಿದ ಶಾಸಕರು

06:50 AM Jul 28, 2018 | Team Udayavani |

ಬೆಂಗಳೂರು: ಆಷಾಢ ಮಾಸ ಮುಗಿದ ತಕ್ಷಣ ಸಂಪುಟ ವಿಸ್ತರಣೆ ಮಾಡುವ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಸಂಪುಟ ಸೇರಲು ದೆಹಲಿ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ.

Advertisement

ನಗರದ ಶಾಸಕರಾದ ಬೈರತಿ ಬಸವರಾಜ್‌, ಎಸ್‌.ಟಿ. ಸೋಮಶೇಖರ್‌ ಹಾಗೂ ಮುನಿರತ್ನ ಶುಕ್ರವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿದ್ದು, ತಮ್ಮಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಪಡೆದಿದ್ದು, ಲೋಕಸಭೆ ಚುನಾವಣೆಗೆ ಪಕ್ಷಕ್ಕೆ ಶಕ್ತಿ ತುಂಬಲು ನಗರ ಪ್ರತಿನಿಧಿಸುವ ಶಾಸಕರಲ್ಲಿ ತಮಗೆ ಆದ್ಯತೆ ನೀಡುವಂತೆ  ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
 

Advertisement

Udayavani is now on Telegram. Click here to join our channel and stay updated with the latest news.

Next