Advertisement

ಸಿಎಂ ರೇಸ್‌ನಲ್ಲಿದ್ದೇನೆ ಎಂದು ಹೇಳುವುದಿಲ್ಲ, ಆದರೆ…: ಪ್ರತಿಭಾ ವೀರಭದ್ರ ಸಿಂಗ್

10:51 PM Dec 08, 2022 | Team Udayavani |

ಶಿಮ್ಲಾ: ನಾನು ಸಿಎಂ ರೇಸ್‌ನಲ್ಲಿದ್ದೇನೆ ಎಂದು ಹೇಳುವುದಿಲ್ಲ ಎಂದು ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಹೇಳಿಕೆ ನೀಡಿದ್ದಾರೆ.

Advertisement

ಶಾಸಕರು ತಮ್ಮ ನಾಯಕನನ್ನು ಆಯ್ಕೆ ಮಾಡುತ್ತಾರೆ, ನಿರ್ಧಾರವನ್ನು ಪಕ್ಷದ ಹೈಕಮಾಂಡ್‌ಗೆ ತಿಳಿಸಲಾಗುವುದು. ಆದರೆ ವೀರಭದ್ರ ಸಿಂಗ್ ಅವರ ಹೆಸರಿನಲ್ಲಿ ನಾವು ಈ ಚುನಾವಣೆಯನ್ನು ಗೆದ್ದಿದ್ದೇವೆ. ನೀವು ಅವರನ್ನು ಮತ್ತು ಅವರ ಕುಟುಂಬವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರತಿಭಾ ಅವರ ಪುತ್ರ ಶಾಸಕ ವಿಕ್ರಮಾದಿತ್ಯ ಸಿಂಗ್ ಬೆಂಬಲದೊಂದಿಗೆ, ಕಳೆದ ವರ್ಷ ವಿಧಿವಶರಾದ ಆರು ಬಾರಿ ಮುಖ್ಯಮಂತ್ರಿಯಾಗಿದ್ದ ಪತಿ ವೀರಭದ್ರ ಸಿಂಗ್ ಅವರ ಹೆಸರಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. 68 ಸ್ಥಾನಗಳ ಪೈಕಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದು ಸರಕಾರ ರಚಿಸಲು ಸಿದ್ಧತೆ ನಡೆಸಿದೆ.

ವೀರಭದ್ರ ಜೀ ಅವರಿಗೆ ಗೌರವ ಸಲ್ಲಿಸಲು ಜನರು ನಮಗೆ ಈ ಜನಾದೇಶ ನೀಡಿದ್ದಾರೆ. ಇಂದು ನನಗೆ ಭಾವನಾತ್ಮಕ ಕ್ಷಣವಾಗಿದೆ ಮತ್ತು ಅವರು ಹಲವು ಬಾರಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ದ ರೀತಿಯಲ್ಲಿ ಇದು ಒಂದು ಎಂದು ತೋರುತ್ತದೆ ಎಂದು ಪ್ರತಿಭಾ ಹೇಳಿದ್ದಾರೆ.

ನೀವೂ ರೇಸ್‌ನಲ್ಲಿದ್ದೀರಾ ಎಂದು ಕೇಳಿದಾಗ, “ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೆ ನಾನು ಹಿಂದೆ ಸರಿಯುವುದಿಲ್ಲ.ಕಾಂಗ್ರೆಸ್ ಪ್ರಜಾಸತ್ತಾತ್ಮಕ ಪಕ್ಷವಾಗಿದ್ದು, ಶಾಸಕರು ಏನು ನಿರ್ಧರಿಸಿದರೂ ಅದನ್ನು ಗೌರವಿಸಲಾಗುವುದು” ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.

Advertisement

ವೀರಭದ್ರ ಸಿಂಗ್ ಅವರ ಪತ್ನಿ ಅಥವಾ ಮಗನ ಹೊರತಾಗಿ ಇನ್ನಿಬ್ಬರು ಸ್ಪರ್ಧಿಗಳಿ ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದ ಸುಖವಿಂದರ್ ಸುಖು ಮತ್ತು ಹಿರಿಯ ನಾಯಕ ಮುಖೇಶ್ ಅಗ್ನಿಹೋತ್ರಿ ಸಿಎಂ ಹುದ್ದೆಯ ರೇಸ್ ನಲ್ಲಿದ್ದಾರೆ.

ಶಿಮ್ಲಾದಲ್ಲೇ ಶಾಸಕರ ಸಭೆ

ನೂತನವಾಗಿ ಆಯ್ಕೆಯಾಗಿರುವ ಶಾಸಕರೆಲ್ಲ ಶಿಮ್ಲಾದಲ್ಲಿಯೇ ಶುಕ್ರವಾರ ಸಭೆ ಸೇರಲಿದ್ದಾರೆ. ಈ ಸಂದರ್ಭದಲ್ಲಿ ನೂತನ ಶಾಸಕಾಂಗ ಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಇದಕ್ಕಿಂತ ಮೊದಲು ನಡೆದಿದ್ದ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷದ ಶಾಸಕರನ್ನು ಖರೀದಿಸಲಿದೆ ಎಂಬ ಭೀತಿಯಿಂದ ಚಂಡೀಗಢಕ್ಕೆ ಪಕ್ಷದ ಶಾಸಕರನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಶುಕ್ಲಾ ಸರ್ಕಾರ ರಚನೆ ಮಾಡಲು ಮತದಾರರು ಅವಕಾಶ ನೀಡಿದ್ದು ಸಂತಸ ತಂದಿದೆ ಎಂದಿದ್ದಾರೆ. ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಗೇಲ್‌, ಹರ್ಯಾಣದ ಮಾಜಿ ಸಿಎಂ ಭೂಪಿಂದರ್‌ ಸಿಂಗ್‌ ಹೂಡಾ ವೀಕ್ಷಕರನ್ನಾಗಿ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next