Advertisement
ಸಿ.ಟಿ.ರವಿ, ಅಂದು ಪರಿಷತ್‌ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿ 8 ಪುಟಗಳ ವಿವರದ ದೂರು ನೀಡಿದ್ದು, ತಮ್ಮ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಡಿಜಿ- ಐಜಿಪಿಯಿಂದ ಸ್ಪಷ್ಟನೆ ಪಡೆದುಕೊಳ್ಳಲು ಮನವಿ ಮಾಡಿದರು.
ಡಿ.19ರಂದು ಇಡೀ ರಾತ್ರಿ ಪೊಲೀಸರ ಅಮಾನವೀಯವಾಗಿ ವರ್ತಿಸಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.
ಬಂಧನ ಪ್ರಕರಣದಲ್ಲಿ ಸತ್ಯಶೋಧನೆ ನಡೆಸುವಂತೆ, ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿರ್ದೇಶನದಂತೆ ಸಂವಿಧಾನ ಮತ್ತು ಕಾನೂನು ಉಲ್ಲಂಘನೆ ಮಾಡಿ ಪೊಲೀಸ್ ಇಲಾಖೆ ಮೂಲಕ ಅಧಿಕಾರದ ದುರ್ಬಳಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು. ನಕಲಿ ಎನ್‌ಕೌಂಟರ್ ವಿಚಾರ ಪ್ರಸ್ತಾಪಿಸಿರುವ ಸಿ.ಟಿ.ರವಿ, ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ ಮೇರೆಗೆ ನಿಗೂಢ ಸ್ಥಳಗಳಿಗೆ ಕರೆದೊಯ್ದು ಫೇಕ್ ಎನ್‌ಕೌಂಟರ್ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಸುವರ್ಣಸೌಧದೊಳಗೆ ಪ್ರವೇಶಿಸಿ ಬಂಧಿಸಿದ್ದು, ಅಕ್ರಮ ನನ್ನ ಹಕ್ಕು ಚ್ಯುತಿ ಆಗಿದೆ ಎಂದಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಮಾಡಿವುದಾಗಿ ಧಮ್ಕಿ ಹಾಕಿದ್ದು, ಅವರ ಬೆಂಬಲಿಗರಿಂದಲೂ ಫೇಕ್ ಎನ್‌ಕೌಂಟರ್ ಸಂಚು ಆರೋಪ ಮಾಡಿದ್ದಾರೆ. ಸದನದ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಐಡಿಗಿಲ್ಲ. ಘಟನೆ ನಡೆದ ಸ್ಥಳ ಸಿಐಡಿ ವ್ಯಾಪ್ತಿಗೂ ಬರುವುದಿಲ್ಲ. ನನ್ನ ಬಂಧನ ಅಕ್ರಮ, ಕಾನೂನು ವಿರೋಧಿ ಅಂತ ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಸುದೀರ್ಘ ದೂರಿನಲ್ಲಿ ಹಲವು ಅಂಶಗಳ ಉಲ್ಲೇಖಿಸಿದ್ದಾರೆ.
Related Articles
Advertisement