Advertisement
ದ.ಕ.ದಲ್ಲಿ 231 ಹಾಗೂ ಉಡುಪಿ ಜಿಲ್ಲೆಯಲ್ಲಿ 158 ಮತಗಟ್ಟೆಗಳು ಸೇರಿ 389 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ.
Related Articles
Advertisement
ದ.ಕ.ದ ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು, ಸುಳ್ಯಗಳಲ್ಲಿ ತಾಲೂಕು ಕಚೇರಿ, ಮಂಗಳೂರಿನಲ್ಲಿ ತಾ. ಪಂ., ಬಂಟ್ವಾಳದಲ್ಲಿ ಇನ್‌ಫೆಂಟ್ ಜೀಸಸ್ ಹಿ. ಪ್ರಾ. ಕನ್ನಡ ಮಾಧ್ಯಮ ಶಾಲೆ ಮೊಡಂಕಾಪು, ಕಡಬದಲ್ಲಿ ಪ. ಪಂ. ಕಚೇರಿ, ಉಡುಪಿಯಲ್ಲಿ ಬೈಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾಪು, ಹೆಬ್ರಿ ಹಾಗೂ ಕಾರ್ಕಳದಲ್ಲಿ ತಾಲೂಕು ಕಚೇರಿಗಳಲ್ಲಿ ಸ್ಥಾಪಿಸಿರುವ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಗಳಿಂದ ಚುನಾವಣ ಸಿಬಂದಿ ಮತದಾನಕ್ಕೆ ಸಂಬಂಧಿಸಿದ ಅಗತ್ಯ ಪರಿಕರಗಳನ್ನು ತೆಗೆದುಕೊಂಡು ಮತಗಟ್ಟೆಗಳಿಗೆ ತೆರಳಿದರು.
ಡಿಸಿ ಡಾ| ರಾಜೇಂದ್ರ ಕೆ.ವಿ. ಅವರು ಮಂಗಳೂರು, ಬಂಟ್ವಾಳ ಹಾಗೂ ಪುತ್ತೂರು ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತದಾನದ ಬಳಿಕ ಮತಪೆಟ್ಟಿಗೆಗಳನ್ನು ಡಿಮಸ್ಟರಿಂಗ್ ಕೇಂದ್ರಗಳಿಂದ ತಂದು ಮಂಗಳೂರಿನ ರೋಸಾರಿಯೋ ಪದವಿಪೂರ್ವ ಕಾಲೇಜಿನಲ್ಲಿ 10 ಸ್ಟ್ರಾಂಗ್ ರೂಂಗಳಲ್ಲಿ ಇಡಲಾಗುವುದು. ಡಿ.14ರಂದು ಇಲ್ಲಿ ಮತ ಎಣಿಕೆಯ ನಡೆಯಲಿದೆ.