Advertisement

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

09:30 PM May 11, 2024 | |

ಬೆಂಗಳೂರು : ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ಜೂ.3 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಐವರು ಅಭ್ಯರ್ಥಿಗಳ ಹೆಸರನ್ನು ಶನಿವಾರ ಪ್ರಕಟಿಸಿದೆ. ಆರು ಕ್ಷೇತ್ರಗಳ ಪೈಕಿ ಮೈತ್ರಿಯ ಕಾರಣ ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.

Advertisement

ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ,ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಅವರು ಸ್ಪರ್ಧಿಸಲಿದ್ದಾರೆ.

ಕಲಬುರಗಿಯ ಬಿಜೆಪಿ ನಾಯಕ ಅಮರನಾಥ್ ಪಾಟೀಲ್ ಅವರು ಹಿಂದೆಯೂ ಪರಿಷತ್ ಸದಸ್ಯರಾಗಿದ್ದವರು. ಮತ್ತೆ ಕಣಕ್ಕಿಳಿಯಲಿದ್ದಾರೆ.

ಕೊನೆಯ ಕ್ಷಣದವರೆಗೂ ಕುತೂಹಲ ಮೂಡಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದ್ದ  ಜನಪ್ರಿಯ ವೈದ್ಯ ಡಾ.ಧನಂಜಯ ಸರ್ಜಿ ಅವರಿಗೆ ಬಿಜೆಪಿ ಅವಕಾಶ ಮಾಡಿ ಕೊಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next