Advertisement

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

12:55 AM May 20, 2024 | Team Udayavani |

ಉಡುಪಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್‌.ಎಲ್‌. ಭೋಜೇಗೌಡರ ಗೆಲುವಿಗೆ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆಯಿಂದ ತೊಡಗಿಸಿಕೊಳ್ಳ ಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

Advertisement

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆ ಅವಲೋಕನ ಹಾಗೂವಿಧಾನಪರಿಷತ್‌ ಚುನಾವಣ ಪೂರ್ವಸಿದ್ಧತ ಸಭೆಯಲ್ಲಿ ಅವರು ಮಾತನಾಡಿದರು.

ಈ ಬಾರಿ ಡಾ| ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಎನ್‌ಡಿಎ ಅಭ್ಯರ್ಥಿ ಯಾಗಿ ಭೋಜೇಗೌಡ ಸ್ಪರ್ಧಿಸಲು ಬಿಟ್ಟುಕೊಡಲಾಗಿದೆ. ಪಕ್ಷದ ಪರಂಪರೆಯಂತೆ ಅಭ್ಯರ್ಥಿ ಘೋಷಣೆಯಾದ ಬಳಿಕ ಯಾವುದೇ ಗೊಂದಲ ಉಳಿದಿಲ್ಲ ಎಂದರು.

ಕಿಶೋರ್‌ ಕುಮಾರ್‌ ಕುಂದಾಪುರ ಮಾತನಾಡಿ, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿಗಳ ಘೋಷಣೆಯಾಗಿದೆ. ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ.

ಕಾರ್ಯಕರ್ತರೇ ಪಕ್ಷದ ಜೀವಾಳ. ಯಾವುದೇ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಅಂತಹ ಸನ್ನಿವೇಶದಲ್ಲಿ ಪಕ್ಷದ ಚೌಕಟ್ಟಿನೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

ಶಾಸಕ ಯಶ್‌ಪಾಲ್‌ ಸುವರ್ಣ ಮತನಾಡಿ, ಆರೆಸ್ಸೆಸ್‌ನ ಶಿಕ್ಷಣ ಪಡೆದು ವಿವಿಧ ಹುದ್ದೆ ನಿಭಾಯಿಸಿ, ಪ್ರಸಕ್ತ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾಗಿರುವ ಡಾ|ಸರ್ಜಿ ಹಾಗೂ ಎನ್‌ಡಿಎ ಅಭ್ಯರ್ಥಿ ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮಾತನಾಡಿ, ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷ ಘೋಷಿಸಿದ ಅಭ್ಯರ್ಥಿಯನ್ನೇ ಗೆಲ್ಲಿಸೋಣ ಎಂದರು. ವಿಭಾಗ ಸಂಘಟನ ಪ್ರಧಾನ ಕಾರ್ಯ ದರ್ಶಿ ಪ್ರಸಾದ್‌ ಕುಮಾರ್‌, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next