Advertisement

ಕ್ಷೇತ್ರಕ್ಕೆ ಬಿಜೆಪಿ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡುತ್ತಿಲ್ಲ

01:30 PM Dec 06, 2021 | Team Udayavani |

ಚೇಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂಜೂರು ಆಗಿದ್ದ ಕಾಮಗಾರಿಗಳೇ, ಕ್ಷೇತ್ರದಲ್ಲಿ ನನ್ನ ಮರ್ಯಾದೆ ಉಳಿಸಿವೆ. ಇದೀಗಬಿಜೆಪಿ ಸರ್ಕಾರ ಬಾಗೇಪಲ್ಲಿ ಕ್ಷೇತ್ರಕ್ಕೆ ಒಂದು ಪೈಸೆಹಣ ಬಿಡುಗಡೆ ಮಾಡುತ್ತಿಲ್ಲ, ನಾವು ಪ್ರತಿದಿನಸಚಿವರ ಕಚೇರಿಗಳಿಗೆ ಅಲೆದಾಡುತ್ತಿದ್ದರೂ ಹಣನೀಡುತ್ತಿಲ್ಲ ಎಂದು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

Advertisement

ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿಏರ್ಪಡಿಸಿದ್ದ ಎಂಎಲ್ಸಿ ಚುನಾವಣಾ ಕಾಂಗ್ರೆಸ್‌ ಅಭ್ಯರ್ಥಿ ಅನಿಲ್‌ಕುಮಾರ್‌ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ಅಭಜಿತ ಜಿಲ್ಲೆಯಲ್ಲಿ ಕಾಂಗ್ರೆಸ್‌ನಹಾಲಿ, ಮಾಜಿ ಶಾಸಕರು ಪಕ್ಷದ ಅಭ್ಯರ್ಥಿ ಅನಿಲ್‌ಕುಮಾರ್‌ ಗೆಲುವಿಗೆ ಶ್ರಮಿಸುತ್ತಿದ್ದು, ಅವರಿಗೆ ನೀವುನಿಮ್ಮ ಮತ ನೀಡಿ ಗೆಲ್ಲಿಸಿಕೊಡಬೇಕಾಗಿದೆ. ಈ ಹಿಂದೆಅನಿಲ್‌ಕುಮಾರ್‌ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ. ಭರವಸೆ ಹುಸಿ ಮಾಡದೆ ಮತ ಹಾಕಬೇಕಾಗಿದೆ ಎಂದು ಹೇಳಿದರು.

ನಿರ್ಗತಿಕರಿಗೆ ಮನೆ ಮಂಜೂರಿಲ್ಲ: ಯಾರೋ ಹೇಳುವ ಮಾತುಗಳು ಕಿವಿಗೆ ಹಾಕಿಕೊಳ್ಳಬೇಡಿಎಂದು ಕಾಂಗ್ರೆಸ್‌ ಬೆಂಬಲಿತ ಗ್ರಾಪಂ ಸದಸ್ಯರಲ್ಲಿ ಮನವಿ ಮಾಡಿದ ಶಾಸಕರು, ಈಗಿನ ಬಿಜೆಪಿ ಸರ್ಕಾ ರಕ್ಕೆ ಮೂಲ ಸೌಲಭ್ಯ ಒದಗಿಸುವ ಮನಸ್ಸಿಲ್ಲ, ಗ್ರಾಮಾಂತರ ಪ್ರದೇಶಗಳಲ್ಲಿ ಈಗಲೂ ಗುಡಿಸಲು ಹಾಕಿ ಕೊಂಡು ಜೀವನ ನಡೆಸುತ್ತಿದ್ದಾರೆ. ಇಂತಹನಿರ್ಗತಿಕರಿಗೆ ಸರ್ಕಾರ ಮನೆ ಮಂಜೂರು ಮಾಡುತ್ತಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್‌ ಬಲಪಡಿಸಿ: ಕೊರೊನಾ ಸೋಂಕು ಅಡ್ಡ ಇಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಅಡ್ಡಗಾಲುಹಾಕುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಅಭಿವೃದ್ಧಿ ಮಾಡಲು ಸಾಧ್ಯವಾಗುವುದಿಲ್ಲ.ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ತನ್ನಿ: ಬಾಗೇಪಲ್ಲಿ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ನರೇಂದ್ರ ಮಾತನಾಡಿ, ಅವಿಭಜಿತ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನುಮೆಚ್ಚಿ ಮಾಜಿ ಶಾಸಕರು, ಮುಖಂಡರು, ಪಕ್ಷ ಸೇರುತ್ತಿದ್ದಾರೆ. ಬಿಜೆಪಿ ಸರ್ಕಾರದ ದುರಾಡಳಿತದಿಂದಜನತೆ ಬೇಸತ್ತು ಹೋಗಿದ್ದಾರೆ. ಇದನ್ನು ತೊಲಗಿಸಲುನೀವು ಕೈ ಜೋಡಿಸಿ, ಬಿಜೆಪಿಯನ್ನು ಮನೆಗೆ ಕಳುಹಿಸಿ -ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕೆಂದರು.

Advertisement

ಚೇಳೂರು, ನಲ್ಲಗುಟ್ಲಪಲ್ಲಿ, ಪಾಳ್ಯಕೆರೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.ಇದಕ್ಕೂ ಮುನ್ನ ಚೇಳೂರು ಹೋಬಳಿಯ ರಾಶ್ಚರವು,ಚಾಕವೇಲು, ಪುಲಗಲ್ಲು ಗ್ರಾಪಂ ಕೇಂದ್ರಗಳಲ್ಲಿಪ್ರಚಾರ ಸಭೆ ನಡೆಸಿ ಅನಿಲ್‌ಕುಮಾರ್‌ಗೆ ಮತಗಳು ಹಾಕಿಸಿ ಗೆಲ್ಲಿಸಿ ಕೊಡಲು ಮನವಿ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next