Advertisement

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

11:44 PM May 15, 2024 | Team Udayavani |

ಉಡುಪಿ: ಕಾರ್ಯಕರ್ತರ ಧ್ವನಿಯಾಗಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ. ಗೆದ್ದ ಮೇಲೆ ನಾನಾಗಿಯೇ ಬಿಜೆಪಿ ಕಚೇರಿಗೆ ಹೋಗುವೆ. ಸೋತರೂ ಬಿಜೆಪಿ ಕಾರ್ಯ ಕರ್ತನಾಗಿಯೇ ಇರುವೆ. ಸಂಘದ ಹಿರಿಯರೂ ಆಯ್ತು ನೋಡೋಣ ಕೆಲಸ ಮಾಡಿ ಎನ್ನುವ ಅನಿ ವಾರ್ಯ ಸ್ಥಿತಿಯಲ್ಲಿ ಇದ್ದಾರೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಬಿಜೆಪಿಯ ಕೆ. ರಘುಪತಿ ಭಟ್‌ ಹೇಳಿದರು.

Advertisement

ತಮ್ಮ ಮನೆಯಲ್ಲಿ ಬುಧವಾರ ನಡೆದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಇಂತಹ ದಿನ ಬರಲಿದೆ ಎಂದೂ ಯೋಚಿಸಿರಲಿಲ್ಲ. ಇದು ದುಡುಕಿನ ನಿರ್ಧಾರವಲ್ಲ; ಯೋಚಿಸಿಯೇ ತೆಗೆದುಕೊಂಡಿದ್ದು. ಕಣದಿಂದ ಹಿಂದೆ ಸರಿಯಲಾರೆ ಎಂದರು.

2023ರ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷದಿಂದ ಟಿಕೆಟ್‌ ಕೈತಪ್ಪಿದಾಗ ಕಾಂಗ್ರೆಸ್‌ ಅಥವಾ ಪಕ್ಷೇತರರಾಗಿ ಸ್ಪರ್ಧಿಸಲು ಒತ್ತಡ ಇತ್ತು. ಆದರೂ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡಿದೆ. ಲೋಕಸಭೆ ಚುನಾವಣೆಯಲ್ಲೂ ಪೂರ್ಣ ತೊಡಗಿಕೊಂಡೆ. ಆದರೆ ಬಿಜೆಪಿ ನಾಯಕರು ನಾನು ಮೂರು ಬಾರಿ ಗೆದ್ದಿರುವ ಮಾಜಿ ಶಾಸಕ ಎಂಬುದನ್ನು ಮರೆತು ಕಚೇರಿಯಲ್ಲಿದ್ದ ನನ್ನ ಭಾವಚಿತ್ರವನ್ನು ತೆಗೆದು ಹಾಕಿದರು. ಕನಿಷ್ಠ ಮನ್ನಣೆ, ಪ್ರೀತಿ, ಗೌರವವನ್ನು ತೋರಿಸಿಲ್ಲ ಎಂದು ದೂರಿದರು.

ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ದಶಕಗಳ ಪದ್ಧತಿ ಮುರಿದಿದ್ದಾರೆ. ನಾನು ಯಾರನ್ನೂ ಸೋಲಿಸಲು ನಿಲ್ಲುತ್ತಿಲ್ಲ. ಜನರ ಸೇವೆ ಮಾಡಲು ಸ್ಪರ್ಧಿಸುತ್ತಿರುವೆ. ಮೋದಿಯವರ ಆದರ್ಶ, ಡಾ| ವಿ.ಎಸ್‌. ಆಚಾರ್ಯರ ಮಾರ್ಗ ದರ್ಶನ ಹಾಗೂ ಕರಂಬಳ್ಳಿ ಸಂಜೀವ ಶೆಟ್ಟಿಯವರು ನೀಡಿದ್ದ ಪಾಠ ಸದಾ ನನ್ನೊಂದಿಗೆ ಇರುತ್ತದೆ ಮತ್ತು ನಾನು ಎಂದಿಗೂ ಬಿಜೆಪಿಗನೇ ಆಗಿರುವೆ ಎಂದರು. ವಾಸುದೇವ್‌ ಭಟ್‌ ಪೆರಂಪಳ್ಳಿ ನಿರೂಪಿಸಿದರು.

ದೈವದ ಅಭಯ ನುಡಿ: ಮನೆಯಲ್ಲಿ ನಡೆದ ಕೋಲದ ಸಂದರ್ಭ ನನ್ನ ಸ್ಪರ್ಧೆಯ ಬಗ್ಗೆ ಕಲ್ಕುಡ, ಪಂಜುರ್ಲಿ ದೈವಗಳಲ್ಲಿ ಪ್ರಶ್ನೆ ಮಾಡಿದಾಗ “ನಿನ್ನ ನಿರ್ಧಾರ ಸರಿಯಾಗಿದೆ; ಮುಂದೆ ಸಾಗಬಹುದು’ ಎಂಬ ನುಡಿ ಸಿಕ್ಕಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next