Advertisement

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆ ಆರಂಭ

10:21 AM Nov 10, 2020 | keerthan |

ಧಾರವಾಡ: ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದಿಂದ ನಡೆದಿರುವ ಚುನಾವಣೆಯ ಫಲಿತಾಂಶಕ್ಕಾಗಿ ಮತ ಏಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.

Advertisement

ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಅ. 28 ರಂದು ನಡೆದ ಮತದಾನದಲ್ಲಿ ಒಟ್ಟು 52,067 ಜನ ಮತಚಲಾಯಿಸಿದ್ದಾರೆ. ಒಂದು ಅಂಚೆ ಮತಪತ್ರವಿದೆ. ಹೀಗಾಗಿ ಒಟ್ಟು 52,068 ಮತಗಳ ಏಣಿಕೆ ಆರಂಭವಾಗಿದೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಎರಡು ಕೊಠಡಿಗಳಲ್ಲಿ 14 ಟೇಬಲ್ ಗಳಲ್ಲಿ ಮತ ಏಣಿಕೆ ನಡೆಯುತ್ತಿದೆ. ಒಟ್ಟು 64 ಸಿಬ್ಬಂದಿ ನೇಮಿಸಲಾಗಿದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದ್ದು, ಒಂದು ಹೆಲ್ತ್ ಸೆಂಟರ್ ಸಹ ತೆರೆಯಲಾಗಿದೆ.

ಇನ್ನು ಬಿಜೆಪಿಯಿಂದ ಎಸ್.ವಿ. ಸಂಕನೂರ, ಕಾಂಗ್ರೆಸ್ ನಿಂದ ಆರ್.ಎಂ. ಕುಬೇರಪ್ಪ ಹಾಗೂ ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಸೇರಿದಂತೆ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೂರು ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next