Advertisement
ಶನಿವಾರ ವಿವಿಧ ಶಿಕ್ಷಣ ಸಂಸ್ಥೆಗಳ ಪದವೀಧರರ ಹಾಗೂ ನೌಕರರ ಜತೆಗೆ ವಿವಿಧ ವಾಣಿಜ್ಯ ಮಳಿಗೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಮತದಾರರ ಬಳಿ ಮತಯಾಚಿಸಿದ ಅವರು, ಜನರು ನಮ್ಮ ಕುಟುಂಬದ ಮೇಲೆ ವಿಶ್ವಾಸವಿಟ್ಟು ಆಶೀರ್ವದಿಸುತ್ತ ಬಂದಿದ್ದಾರೆ. ಇದೀಗ ಈ ಭಾಗದ ಪದವೀಧರರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಡಲು ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ತಿಳಿಸಿದರು.
ಸಾವಿರಾರು ಯುವಜನರಿಗೆ ಸರಕಾರಿ ಉದ್ಯೋಗ ದೊರಕುವಂತಾಗಿದೆ. ಪದವೀಧರ ಮತದಾರರು ಇದನ್ನೆಲ್ಲ ಅವಲೋಕಿಸಿ ತಮಗೆ ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು. ರಾಜ್ಯದ ಹಿಂದಿನ ಕಾಂಗ್ರೆಸ್ ಸರಕಾರದ ಸಾಧನೆಗಳು ಹಾಗೂ ಈಗಿನ ಕೇಂದ್ರ ಸರಕಾರದ ವೈಫಲ್ಯಗಳ ಬಗ್ಗೆ ಯುವಜನರು, ಪದವೀಧರರು ಸಂಪೂರ್ಣ ಅರಿವು ಹೊಂದಿದ್ದು ಬಿಜೆಪಿಯನ್ನು ಸಾರಾಸಗಟಾಗಿ ತಿರಸ್ಕರಿಸಿ ಕಾಂಗ್ರೆಸ್‌ಗೆ ಬೆಂಬಲಿಸಲು ಒಲವು ಹೊಂದಿದ್ದಾರೆ. ಅಲ್ಲದೆ ಈ ಕ್ಷೇತ್ರ ಶಿಕ್ಷಕರ ಮತಕ್ಷೇತ್ರದಂತೆ ಕಾಂಗ್ರೆಸ್ ವಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Related Articles
Advertisement