ರಂಗ ಪ್ರಚಾರಗಳನ್ನು ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿಯೇ ನಿಲ್ಲಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
Advertisement
ಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯವಾದ ಗಡುವಿನ ಅನಂತರ (ಡಿ. 7ರ ಸಂಜೆ4 ಗಂಟೆಯಿಂದ) ಚುನಾವಣಾ ಕ್ಷೇತ್ರದಮತದಾರರಲ್ಲದವರು, ರಾಜಕೀಯ ಕಾರ್ಯಕರ್ತರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ದ.ಕ. ಸ್ಥಳೀಯ ಸಂಸ್ಥೆಗಳ ಚುನಾವಣಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿರುವ ಮತದಾರರಲ್ಲದ ಹೊರಗಿನ ರಾಜಕೀಯ ಕಾರ್ಯಕರ್ತರು ಮತ್ತು ಮುಖಂಡರು ಬಹಿರಂಗ ಪ್ರಚಾರದ ಗಡುವು ಮುಕ್ತಾಯದ ಅನಂತರವೂ ಚುನಾವಣೆ ಕ್ಷೇತ್ರದಲ್ಲಿ ಇದ್ದಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಡಿ. 9ರ ಮಧ್ಯರಾತ್ರಿ 12ರಿಂದ ಡಿ. 10ರ ಮಧ್ಯರಾತ್ರಿ 12 ಗಂಟೆಯ ವರೆಗೆ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಮದ್ಯ ಮುಕ್ತ ದಿನವೆಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.