Advertisement

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

12:27 AM May 21, 2024 | Team Udayavani |

ಪುತ್ತೂರು: ಈ ಹಿಂದಿನ ಚುನಾವಣೆಗಳಲ್ಲಿ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಇಬ್ಬರು ಅಭ್ಯರ್ಥಿಗಳ ಪರವಾಗಿ ಪದವೀಧರ, ಶಿಕ್ಷಕರ ಒಲವು ಇದ್ದು ಗೆಲುವು ನಿಶ್ಚಿತ ಎಂದು ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಸಂವಾದ ಕಾರ್ಯಕ್ರಮವು ಸೋಮವಾರ ಕಲ್ಲೇಗ ಭಾರತ್‌ ಮಾತಾ ಸಭಾಭವನದಲ್ಲಿ ನಡೆಯಿತು.

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್‌.ಎಲ್‌. ಭೋಜೇಗೌಡ ಮಾತನಾಡಿ, ಕಾಂಗ್ರೆಸ್‌ ಪಕ್ಷವು ವಿಧಾನಸಭಾ ಚುನಾವಣೆ ಸಂದರ್ಭ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ಶಿಕ್ಷಕರಿಗೆ ಒಪಿಎಸ್‌ ನೀಡುವು ದಾಗಿ ಘೋಷಿಸಿತ್ತು. ಆದರೆ ವಷ ಕಳೆದರೂ ನೀಡಿಲ್ಲ. ಈಗ ಮತ್ತೆ ಚುನಾವಣೆಗೋಸ್ಕರ ಒಪಿಎಸ್‌ ಅನ್ನು ಜಪಿಸುತ್ತಿದೆ. ಕಾಂಗ್ರೆಸ್‌ನ ಸುಳ್ಳಿನ ತಂತ್ರಗಾರಿಕೆ ಶಿಕ್ಷಕರಿಗೆ ಅರ್ಥವಾಗಿದೆ ಎಂದರು.

ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮಾತನಾಡಿ, ಪ್ರತೀ ಮತದಾರನೂ ತಾನೇ ಅಭ್ಯರ್ಥಿ ಎಂದು ಭಾವಿಸಿಕೊಂಡು ನಮ್ಮನ್ನು ಗೆಲ್ಲಿ ಸಬೇಕು. ಪದವೀಧರ, ಶಿಕ್ಷಕ ಕ್ಷೇತ್ರದ ಕುಂದು ಕೊರತೆಗಳಿಗೆ ಸ್ಪಂದಿಸುವ ಪ್ರಯತ್ನವನ್ನು ನಾನು ಮಾಡುವೆ ಎಂದು ಭರವಸೆ ನೀಡಿದರು.

ಶಾಸಕ ಹರೀಶ್‌ ಪೂಂಜ ಮಾತನಾಡಿ, ಕಾಂಗ್ರೆಸ್‌ ಮಂಡಿಸುವ ಜನವಿರೋಧಿ ಮಸೂದೆಗಳನ್ನು ತಡೆಯಲು ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತದ ಬಲ ಬೇಕು ಎಂದರು.

Advertisement

ವಿವಿಧೆಡೆ ಸಭೆ
ಸುಳ್ಯ ಮತ್ತು ಬಂಟ್ವಾಳದಲ್ಲೂ ಕಾರ್ಯಕರ್ತರ ಸಭೆ ನಡೆಯಿತು. ಎರಡೂ ಸಭೆಗಳಲ್ಲಿ ಡಾ| ಧನಂಜಯ ಸರ್ಜಿ ಹಾಗೂ ಎಸ್‌.ಎಲ್‌ ಭೋಜೇಗೌಡ ಮಾತನಾಡಿದರು. ಬಂಟ್ವಾಳ ಸಭೆಯಲ್ಲಿ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಅಗತ್ಯ ಎಂದು ಪ್ರತಿಪಾದಿಸಿದರು.

ದ.ಕ ಲೋಕಸಭೆ ಚುನಾವಣೆ ಯ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್‌ ಚೌಟ, ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ, ವಿಧಾನಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್‌, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಕ್ಯಾ| ಗಣೇಶ್‌ ಕಾರ್ಣಿಕ್‌, ಮುಖಂಡ ಆರುಣ್‌ ಕುಮಾರ್‌ ಪುತ್ತಿಲ, ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ತಾಲೂಕು ಅಧ್ಯಕ್ಷ ಚೆನ್ನಪ್ಪ ಆರ್‌ ಕೋಟ್ಯಾನ್‌, ಸುಳ್ಯ ಬಿಜೆಪಿ ಅಧ್ಯಕ್ಷ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next