Advertisement

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಗುಲಬರ್ಗಾ ವಿವಿಯಲ್ಲಿ‌ ಮತ ಎಣಿಕೆ ಕಾರ್ಯ ಆರಂಭ

10:20 AM Nov 10, 2020 | keerthan |

ಕಲಬುರಗಿ: ವಿಧಾನ ಪರಿಷತ್‍ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಇಂದು‌ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಮತ ಕ್ಷೇತ್ರ ಎಣಿಕೆ ಕಾರ್ಯ ನಡೆಯುತ್ತಿದೆ.

Advertisement

ಐವರು ಅಭ್ಯರ್ಥಿಗಳು ಕಣದಲ್ಲಿದ್ದು, ಒಟ್ಟು 21,437 ಮತಗಳು ಚಲಾವಣೆಯಾಗಿವೆ. ಮತ ಎಣಿಕೆಗಾಗಿ 7 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬ ಕೌಂಟಿಂಗ್ ಸೂಪರ್ ವೈಸರ್, ಮೂವರು ಕೌಂಟಿಂಗ್ ಅಸಿಸ್ಟೆಂಟ್ ಹಾಗೂ ಓರ್ವ ಡಿ-ಗ್ರೂಪ್ ನೌಕರರನ್ನು ನೇಮಿಸಲಾಗಿದೆ. ಒಟ್ಟಾರೆ 120 ಸಿಬ್ಬಂದಿಯನ್ನು ಮತ ಎಣಿಕೆಗಾಗಿ ನಿಯೋಜಿಸಲಾಗಿದೆ.

ಮತ ಎಣಿಕೆ ಕೇಂದ್ರಕ್ಕೆ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು. ವಿಶ್ವವಿದ್ಯಾಲಯದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.  ಡಿಸಿಪಿ, ಎಸಿಪಿ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.‌

Advertisement

Udayavani is now on Telegram. Click here to join our channel and stay updated with the latest news.

Next