Advertisement

ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ನಾಮಪತ್ರ

01:58 AM Nov 24, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸ್ಥಳೀಯಾಡಳಿತ ಸಂಸ್ಥೆಗಳಿಂದ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಕೆಪಿಸಿಸಿ ಮಾಜಿ ಉಪಾಧ್ಯಕ್ಷ, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಮಂಗಳ ವಾರ ನಾಮಪತ್ರ ಸಲ್ಲಿಸಿದರು.

Advertisement

ಮಲ್ಲಿಕಟ್ಟೆಯ ಕಾಂಗ್ರೆಸ್‌ ಕಚೇರಿಯಿಂದ ಉಭಯ ಜಿಲ್ಲೆಗಳ ಕಾಂಗ್ರೆಸ್‌ ಅಧ್ಯಕ್ಷರು, ಮುಖಂಡರು, ಜನಪ್ರತಿನಿಧಿಗಳ ಜತೆ ಡಿಸಿ ಕಚೇರಿಗೆ ಆಗಮಿಸಿದ ಭಂಡಾರಿಯವರು 3 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು.

ಪ್ರಥಮ ಪ್ರತಿ ಸಲ್ಲಿಕೆ ವೇಳೆ ಶಾಸಕ ಯು.ಟಿ. ಖಾದರ್‌, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್‌, ವಿಧಾನಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಎರಡನೇ ಪ್ರತಿ ಸಲ್ಲಿಕೆ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಮಂಜುನಾಥ ಪೂಜಾರಿ, ಹರಿಪ್ರಸಾದ್‌ ಹಾಗೂ ಮೂರನೇ ಪ್ರತಿ ಸಲ್ಲಿಕೆ ವೇಳೆ ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಶಾಸಕ ರಾದ ಜೆ.ಆರ್‌. ಲೋಬೋ, ಶಕುಂತಳಾ ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಉಪಸ್ಥಿತರಿದ್ದರು.

ಇದನ್ನೂ ಓದಿ:ಉತ್ತರ ಪ್ರದೇಶಕ್ಕೆ ಸಿಗಲಿದೆ ಐದನೇ ಅಂ.ರಾ. ವಿಮಾನ ನಿಲ್ದಾಣ

ನಾಮಪತ್ರ ಸಲ್ಲಿಕೆಗೆ ಆಗಮಿಸಿದ ಸಂದರ್ಭದಲ್ಲಿ ಮಾಜಿ ಶಾಸಕ ಮೊದಿನ್‌ ಬಾವಾ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೋ, ಯುವ ಕಾಂಗ್ರೆಸ್‌ ಅಧ್ಯಕ್ಷ ಲುಕಾ¾ನ್‌ ಬಂಟ್ವಾಳ, ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಸಾಹುಲ್‌ ಹಮೀದ್‌, ಮುಖಂಡರಾದ ಶಶಿಧರ ಹೆಗ್ಡೆ, ಪ್ರಸಾದ್‌ರಾಜ್‌ ಕಾಂಚನ್‌, ಭಾಸ್ಕರ್‌ ಕೆ. ಮೊದಲಾದವರಿದ್ದರು.

Advertisement

ಕಾಂಗ್ರೆಸ್‌ ಗೆಲುವು ಸಾಧಿಸಲಿದೆ: ಭಂಡಾರಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ ಭಂಡಾರಿಯವರು, ಬಂಟ್ವಾಳ ತಾಲೂಕಿನ ಕೃಷಿಕ ಕುಟುಂಬದಲ್ಲಿ ಜನಿಸಿದ ನಾನು ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್‌ ಕಾರ್ಯಕರ್ತನಾಗಿದ್ದೇನೆ. 40 ವರ್ಷಗಳಿಂದ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಕ್ಷದ ಎಲ್ಲ ನಾಯಕರ ಅಶೀರ್ವಾದ, ಕಾರ್ಯಕರ್ತರ ಬೆಂಬಲದೊಂದಿಗೆ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next