ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನಿಟ್ಟುಸಿರು ಬಿಡುವಂತಾಗಿದೆ.
Advertisement
ಹಾಲಿ ಸಂಸದರಾಗಿರುವ ಮುದ್ದಹನುಮೇಗೌಡರು ಪಕ್ಷದ ತೀರ್ಮಾನದಿಂದ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದರಾಜ್ಯ ಕಾಂಗ್ರೆಸ್ ನಾಯಕರು ಕಳೆದ ಐದು ದಿನಗಳಿಂದ ನಿರಂತರವಾಗಿ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದರು.
ಮುದ್ದಹನುಮೇಗೌಡರ ನಿವಾಸಕ್ಕೆ ತೆರಳಿ, ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರ ಮೂಲಕ ಮನವೊಲಿಕೆ ಮಾಡಿದ ನಂತರ ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದರು ಎಂದು ತಿಳಿದು ಬಂದಿದೆ. ಮಾಜಿ ಪ್ರಧಾನಿ ದೇವೇಗೌಡರೇ ಸ್ಪರ್ಧೆ ಮಾಡಿರುವುದರಿಂದ ಅವರ ವಿರುದಟಛಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ, ಮೈತ್ರಿ ಧರ್ಮ ಪಾಲನೆಗೆ ಧಕ್ಕೆಯಾಗುತ್ತದೆ. ಪಕ್ಷದಲ್ಲಿ ನಿಮಗೆ ಸೂಕ್ತ ಸ್ಥಾನ ನೀಡಿ, ನಿಮ್ಮ ಗೌರವ ಕಾಪಾಡುವ ಕೆಲಸ ಮಾಡುವ ಜವಾಬ್ದಾರಿ ನಮ್ಮದು ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Related Articles
ಮುದ್ದಹನುಮೇಗೌಡರು ತಮ್ಮ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕೆಲವು ಕಾರ್ಯಕರ್ತರು, ಪಕ್ಷದ ನಾಯಕರು ನಿಮಗೆ ಸೂಕ್ತ ಗೌರವ,
ಸ್ಥಾನಮಾನ ನೀಡುವ ಭರವಸೆ ನೀಡಿದ್ದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಿ, ಇಲ್ಲದಿದ್ದರೆ ಚುನಾವಣೆ ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.
Advertisement
ಆದರೆ, ಪಕ್ಷದ ನಾಯಕರ ಭರವಸೆಯ ಹಿನ್ನೆಲೆಯಲ್ಲಿ ನಾಮಪತ್ರ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡು, ತಮಗೆ ಬೇಸರ ಆಗಿರುವುದರಿಂದ ತಮ್ಮ ಆಪ್ತ ರವಿಕುಮಾರ್ ಎನ್ನುವವರ ಮೂಲಕ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಮೂಲಗಳ ಪ್ರಕಾರ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ತಮಗೆ ಆಗಿರುವ ನೋವಿನಿಂದಾಗಿ, ಸದ್ಯ ಚುನಾವಣೆ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುದ್ದಹನುಮೇಗೌಡರು ನಾಮಪತ್ರ ವಾಪಸ್ ಪಡೆದರೆ ತಾವು ವಾಪಸ್ ಪಡೆಯುವುದಾಗಿ ಪಕ್ಷದ ನಾಯಕರಿಗೆ ಮಾತು ಕೊಟ್ಟಂತೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ಕೂಡ ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡರು.