Advertisement

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

03:07 PM Jun 19, 2024 | Team Udayavani |

ಮೈಸೂರು:  ಸಿದ್ದರಾಮಯ್ಯ ಅವರ ಸರ್ಕಾರ  ಆರ್ಥಿಕವಾಗಿ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಪರದಾಡುತ್ತಿದೆ. ಇದರ ಬದಲು ಎಲ್ಲಿ, ಯಾವ ಕ್ಷೇತ್ರದಲ್ಲಿ ಸಮಸ್ಯೆಗಳು ಇವೆಯೋ ಅದಕ್ಕೆ ಪರಿಹಾರ ಕಂಡುಕೊಂಡಿದ್ದರೇ ಸಾಕಾಗಿತ್ತು ಎಂದು ಎಂಎಲ್ಸಿ ಎಚ್ ವಿಶ್ವನಾಥ್ ಹೇಳಿದರು.

Advertisement

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿದ ಎಚ್ ಅವರು, ಈ ಎಲ್ಲಾ ಗ್ಯಾರಂಟಿಗಳ ಬದಲು ಶಿಕ್ಷಣ ಹಾಗು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಗಮನ ಹರಿಸಬೇಕಿತ್ತು. 1 ರಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ಕೊಡುವ ಕೆಲಸ ಮಾಡಬೇಕಿತ್ತು. ಲಕ್ಷಾಂತರ ರೂಪಾಯಿ ಕೊಟ್ಟು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಸೇರಿಸಿ ಪೋಷಕರು ಪರದಾಡುತ್ತಾರೆ. ಉಚಿತ ಆರೋಗ್ಯದ ಜೊತೆಗೆ ಉಚಿತ ಶಿಕ್ಷಣ ನೀಡಬೇಕಿತ್ತು. ಗ್ಯಾರಂಟಿ ಯೋಜನೆಗಳ ಬದಲು ಎಲ್ಲರಿಗೂ ಉಚಿತ ಶಿಕ್ಷಣ ಯೋಜನೆ ಜಾರಿಗೊಳಿಸಲಿ. 65 ಸಾವಿರ ಕೋಟಿ ಖರ್ಚು ಮಾಡಿ ಅದಕ್ಕೊಬ್ಬ ಉಸ್ತುವಾರಿ, ಜಿಲ್ಲೆಗೊಬ್ಬ ಉಸ್ತುವಾರಿ ಕೊಟ್ಟು ಹಣ ದುರುಪಯೋಗ ಮಾಡುತ್ತಿರುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪಿದೆ. 14,15 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಹಿಂದೆ ತಿರುಗಿ ನೋಡಿಲ್ಲ. ಎಸ್ಟಾಬ್ಲಿಸ್ಮೆಂಟ್ ಗೆ  50%  ಡೆವಲಪ್ಮೆಂಟ್ ಗೆ 50% ಅನುದಾನ ಮೀಸಲಿಡಬೇಕು. ರಾಜ್ಯದಲ್ಲಿ ಬಜೆಟ್ ಅನುದಾನ ಅನಾವಶ್ಯಕವಾಗಿ ಸೋರಿಕೆ ಯಾಗುತ್ತಿದೆ. ಇಲಾಖೆಗಳಲ್ಲಿ ಹಣ ದಿಕ್ಕಾಪಾಲಾಗಿ ಪೋಲಾಗುತ್ತಿದೆ. ಎಸ್ಟಾಬ್ಲಿಸ್ಮೆಂಟ್ ಗೆ 70% ಹೋಗ್ತಾ ಇದೆ. ಡೆವಲಪ್ಮೆಂಟ್ ಗೆ ಕೇವಲ 30% ಹೋಗುತ್ತಿದೆ. ನೀವ್ಯಾವ ಸೀಮೆಯ ಹಣಕಾಸು ಸಚಿವ ಮಿಸ್ಟರ್ ಸಿದ್ದರಾಮಯ್ಯ. ರಾಜ್ಯ ಸರ್ಕಾರದ ಆರ್ಥಿಕ ನೀತಿ ದುರ್ಬಲವಾಗಿದೆ. ವಿವೇಚನಾ ರಹಿತವಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.  ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬೇರಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಕೆಯಾಗುತ್ತುರುವ ಹಣ ಎಷ್ಟು? ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾದ ಹಣ ಎಷ್ಟು ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ವತಿಯಿಂದ ಯಾವುದೇ ಹುದ್ದೆಗಳು ಭರ್ತಿಯಾಗುತ್ತಿಲ್ಲ. ಖಾಲಿ ಹುದ್ದೆಗಳನ್ನು ತುಂಬುವ ಬದಲು, ಹೊರ ಗುತ್ತಿಗೆ ಆಧಾರದ ಮೇಲೆ ಸಂಬಳ ನೀಡಿ ಕೆಲಸ ಮಾಡಿಸುತ್ತಿದ್ದಾರೆ. ಇದರ ಟೆಂಡರನ್ನು ಮಂತ್ರಿಗಳ, ರಾಜಕಾರಣಿಗಳ ಸಂಬಂಧಿಕರಿಗೆ ಕೊಟ್ಟಿರುತ್ತಾರೆ. ಲೇಬರ್ ಆಕ್ಟ್ ಪ್ರಕಾರ 18 ಸಾವಿರ ಕೊಡಬೇಕು.  ಆದರೆ, ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುವ ನೌಕರನಿಗೆ ಕೊಡೋದೆ 12 ಸಾವಿರ, ಉಳಿದ 6 ಸಾವಿರ ಗುತ್ತಿಗೆದಾರನಿಗೆ ಹೋಗುತ್ತದೆ. ಇದರಲ್ಲೂ ಸರ್ಕಾರದ ಹಣ ಲೂಟಿ ಮಾಡುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಜಿಎಸ್ಟಿ ಎನ್ನುವುದು ಪ್ರತಿ ಹೆಜ್ಜೆಯಲ್ಲೂ ಜನ ಸಾಮಾನ್ಯರಿಗೆ ಬೀಳುತ್ತಿದೆ. ನಮ್ಮ ಮುಖ್ಯಮಂತ್ರಿಗಳು ಬುದ್ಧಿವಂತರು, ಆದರೂ ಸರ್ಕಾರದ ನೀತಿ ನಿಯಮಗಳನ್ನೇ ಉಲ್ಲಂಘನೆ ಮಾಡುತ್ತಿದ್ದಾರೆ ಎಂದರು.

Advertisement

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ವಿಚಾರದ ಬಗ್ಗೆ ಮಾತನಾಡಿದ ಅವರು, ನಮ್ಮ ನಾಡು ಕಲೆ, ಸಂಸ್ಕೃತಿ, ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾದುದು. ಕಲಾವಿದರಿಗೆ ಸಾಂಸ್ಕೃತಿಕ ಲೋಕದವರಿಗೆ ಅನುಕರಣೀಯ, ಆದರಿಣೀಯವಾದವರು ಡಾ ರಾಜಕುಮಾರ್. ಅವರನ್ನು ನೋಡಿಕೊಂಡು ಕಲಿಯಲಿಲ್ಲ ಎಂದರೆ ಹೇಗೆ. ದರ್ಶನ್ ಬಗ್ಗೆ ಮಾತನಾಡಿ ನಾನೇಕೆ ಸಾಕ್ಷಿ ಹೇಳಲು ಹೋಗಿ ನಿಲ್ಲಬೇಕು. ದರ್ಶನ್ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಕಳೆದ 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಟ ದರ್ಶನ್ ನನ್ನ ಪರವಾಗಿ ಪ್ರಚಾರ ಮಾಡಿದ್ದರು. ಆಗ ದರ್ಶನ್ ಅವರ ತಾಯಿ ಕಾಂಗ್ರೆಸ್ ನಲ್ಲಿ ಇದ್ದರು. ಹಾಗಾಗಿ ನಟ ದರ್ಶನ್ ನನ್ನ ಪರವಾಗಿ ಮೈಸೂರಿನಿಂದ ಕೊಡಗಿನವರೆಗೂ ಪ್ರಚಾರ ಮಾಡಿದರು ಎಂದು ಹಳೆಯ ದಿನಗಳನ್ನು ಸ್ಮರಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next