Advertisement
ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿಕೆ ರಾಜ್ಯಗಳಿಗೆ ಬೆದರಿಕೆ ಒಡ್ಡುವ ರೀತಿಯಲ್ಲಿದೆ. ಹಾಗೆಯೇ ಈ ಹೇಳಿಕೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
Related Articles
ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಅನ್ನು ರಿವರ್ಸ್ ಗೇರ್ ಸರ್ಕಾರ ಎಂದು ದೊರುತ್ತಿದ್ದಾರೆ. ಜನತೆಗೆ ಗ್ಯಾಸ್ ಸಿಲಿಂಡರ್, ಡೀಸೆಲ್, ಪೆಟ್ರೋಲ್, ನಿತ್ಯದ ದಿನಸಿ ಸಾಮಗ್ರಿಗಳ ಬೆಲೆ ಖಂಡಿತವಾಗಿಯೂ ರಿವರ್ಸ್ ಆಗಲೇಬೇಕು. ಇದಕ್ಕಾಗಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.
Advertisement
ಕರಾವಳಿಯಲ್ಲಿ ಕಾಂಗ್ರೆಸ್ ಹವಾಬಿಜೆಪಿ ನಾಯಕರು ಚುನಾವಣೆ ಪ್ರಚಾರ ಸಂದರ್ಭದಲ್ಲಿ ಬೆಲೆ ಏರಿಕೆ, ಭ್ರಷ್ಟಾಚಾರ, ಶೇ.40ರಷ್ಟು ಕಮಿಷನ್ ಇತ್ಯಾದಿ ಯಾವುದರ ಬಗ್ಗೆಯೂ ಮಾತನಾಡುತ್ತಿಲ್ಲ. ಕೇವಲ ಅಂತಾರಾಷ್ಟ್ರೀಯ ವಿಚಾರ ಮತ್ತು ಭಾವನಾತ್ಮಕ ವಿಷಯಗಳನ್ನು ಪದೇಪದೇ ಹೇಳುತ್ತಿದ್ದಾರೆ. ಇದಕ್ಕೆಲ್ಲ ಜನರು ಮರಳಾಗುವುದಿಲ್ಲ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸೀಟುಗಳನ್ನು ಕಾಂಗ್ರೆಸ್ ಜಯಿಸಲಿದೆ. ಕರಾವಳಿಯಾದ್ಯಂತ ಕಾಂಗ್ರೆಸ್ ಹವಾ ಇದೆ ಎಂದರು. ರಾಜ್ಯದಲ್ಲಿ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.36ರಷ್ಟು ಮತ ಪಡೆದಿತ್ತು. ಈ ಬಾರಿ ಹೆಚ್ಚಿನ ಮತಗಳಿಕೆಯ ಜತೆಗೆ 140ರಿಂದ 150 ಸೀಟುಗಳೊಂದಿಗೆ ಪೂರ್ಣ ಬಹುಮತದ ಸರಕಾರ ಬರಲಿದೆ ಎಂದರು. ಕಾನೂನು ಕೈಗೆತ್ತಿಕೊಂಡರೆ ಕ್ರಮ
ಸಾಮರಸ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟವಾಗಿದೆ. ಯಾರೇ ಕಾನೂನು ಕ್ರಮ ಕೈಗೊತ್ತಿಕೊಂಡರೂ, ನೈತಿಕ ಪೊಲೀಸ್ ಗಿರಿ ನಡೆಸಿದರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿದೆ. ಯಾವುದೇ ಸಂಘಟನೆಯನ್ನು ನಿಷೇಧ ಮಾಡುವುದು ರಾಜ್ಯ ಸರಕಾರದಿಂದ ಸಾಧ್ಯವಿಲ್ಲ. ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಬಹುದು. ಅಂತಿಮ ನಿರ್ಧಾರವನ್ನು ಕೇಂದ್ರವೇ ತೆಗೆದುಕೊಳ್ಳಲಿದೆ ಎಂದು ಬಜರಂಗದಳ ನಿಷೇಧ ಕುರಿತು ಮಂಜುನಾಥ್ ಭಂಡಾರಿ ಅವರು ಸ್ಪಷ್ಟನೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ˌ ಕೆಪಿಸಿಸಿ ಸಂಯೋಜಕರಾದ ದಿನೇಶ್ ಪುತ್ರನ್ ˌ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗಡೆ ಕೊಳ್ಕೆಬೈಲ್ ˌ ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರ್ ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ ˌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಶಲ್ ಶೆಟ್ಟಿˌ ಲೀಗಲ್ ಸೆಲ್ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ ˌ ಪಕ್ಷದ ಮುಖಂಡರಾದ ರವಿ ಶೆಟ್ಟಿ ಉಪಸ್ಥಿತರಿದ್ದರು.