Advertisement

MLC; ನೈಋತ್ಯ ಪದವೀಧರರ ಕ್ಷೇತ್ರ; ಮುನ್ನಡೆ ಕಾಯ್ದುಕೊಂಡ ಬಿಜೆಪಿಯ ಡಾ. ಸರ್ಜಿ

07:45 PM Jun 06, 2024 | Team Udayavani |

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಭಾರೀ ಕುತೂಹಲ ಮೂಡಿಸಿರುವ ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಗುರುವಾರ ನಡೆಯುತ್ತಿದ್ದು 28 ಸಾವಿರ ಮತ‌ಗಳ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ 9216 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Advertisement

14,056 ಮತಗಳನ್ನು ಸರ್ಜಿ ಅವರು ಪಡೆದಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ರಘುಪತಿ ಭಟ್ 4540 ಮತಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 4870 ಮತಗಳನ್ನು ಪಡೆದಿದ್ದಾರೆ.

ತಡ ರಾತ್ರಿವರೆಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ ಎಣಿಕೆ ಕೇಂದ್ರದ ಹೊರಗೆ ಪಕ್ಷಗಳ ಕಾರ್ಯಕರ್ತರು, ಅಭಿಮಾನಿಗಳು ಕಾದು ನಿಂತಿದ್ದಾರೆ.

ಮತ ಎಣಿಕೆ ಕೇಂದ್ರದ ಬಳಿ ಬಿಗಿ‌ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಲಾಗಿದ್ದು ಎಸಿಪಿ ನೇತೃತ್ವದಲ್ಲಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next