Advertisement

ಕೋವಿಡ್ 19 ಆಸ್ಪತ್ರೆಗೆ ಎಂಎಲ್ಸಿ ಭೇಟಿ

01:15 PM Apr 08, 2020 | Suhan S |

ಹಾಸನ: ಜಿಲ್ಲಾ ಕೋವಿಡ್ 19 ಆಸ್ಪತ್ರೆಯೆಂದು ಘೋಷಣೆಯಾಗಿರುವ ಹಾಸನ ವೈದ್ಯಕೀಯ ಕಾಲೇಜು (ಹಿಮ್ಸ್‌) ಬೋಧಕ ಆಸ್ಪತ್ರೆಗೆಪರಿಷತ್‌ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅವರು ಮಂಗಳವಾರ ಭೇಟಿ ನೀಡಿ ವೈದ್ಯಕೀಯ ಸಿದ್ಧತೆಯನ್ನು ಪರಿಶೀಲಿಸಿದರು.

Advertisement

ಹಾಸನ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಆರ್‌.ಕೃಷ್ಣ ಮೂರ್ತಿ ಅವರು ಕೊರೊನಾ ಪ್ರಕರಣಗಳು ವರದಿಯಾದರೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಿರುವ ಐಸೋಲೇಷನ್‌ ವಾರ್ಡ್‌, ಅಲ್ಲಿನಸಿದ್ಧತೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಸ್ವಾಮಿ ಅವರು, ಅದೃಷ್ಟಾವಶಾತ್‌, ಜಿಲ್ಲೆಯಲ್ಲಿ ಈವರೆಗೂ ಕೊರೊನಾ ಪ್ರಕರಣಗಳೂ ವರದಿಯಾಗಿಲ್ಲ. ಇನ್ನು ಮುಂದೆಯೂ ಜಿಲ್ಲೆಯಲ್ಲಿ ಕೋವಿಡ್ 19 ಕಾಣಿಸಿಕೊಳ್ಳಬಾರದು ಎಂದು ದೇವರಲ್ಲಿ ಪ್ರಾರ್ಥಿಸುವೆ. ಹಿಮ್ಸ್‌ ಆಸ್ಪತ್ರೆಯಲ್ಲಿ ಕೋವಿಡ್ 19  ಚಿಕಿತ್ಸೆಗೆ ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವೈದ್ಯರು ಹಾಗೂ ಸಹಾಯಕ ಸಿಬ್ಬಂದಿಗಳ ಸೇವೆ ಅಮೂಲ್ಯ. ಅವರಿಗೆ ಅಗತ್ಯ ಸಾಧನ, ಸಲಕರಣಗಳನ್ನು ನೀಡಿ. ಪಿಪಿಇ ಕಿಟ್‌ ಹಾಗೂ ವೆಂಟಿಲೇಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಲು ಪ್ರಯತ್ನಿಸ ಬೇಕು ಎಂದು ವೈದ್ಯರಿಗೆ ಸಲಹೆ ನೀಡಿದ ಅವರು, ಜಿಲ್ಲೆಯಲ್ಲಿ ಜನರು ಆರೋಗ್ಯ ಇಲಾಖೆಯ ಮಾರ್ಗದರ್ಶನವನ್ನು ಪಾಲಿಸಬೇಕು. ಕೋವಿಡ್ 19  ಶಂಕೆಯ  ಪ್ರಕರಣಗಳ ಪರಿಶೀಲನೆ ವೇಲೆ ವೈದ್ಯ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next