Advertisement

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜಿನಾಮೆ

06:05 PM Jun 03, 2021 | Team Udayavani |

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಪಾಲಿಕೆ ಆಯುಕ್ತೆ ಶಿಲ್ಪಾನಾಗ್  ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

Advertisement

ಏನು ಕೆಲಸ ಮಾಡಿಲ್ಲ ಎಂಬ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಂಧೂರಿ ವಿರುದ್ಧ ಅವರು ಆರೋಪಿಸಿದ್ದಾರೆ. ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಈ ರೀತಿ ಹೇಳುತ್ತಿದ್ದಾರೆ.

ಇದನ್ನೂ ಓದಿ  : ಊರಿನ ಜನರನ್ನು ಭಯ ಹುಟ್ಟಿಸಿದ್ದ ಚಿರತೆ : ಡ್ರೋನ್‌ ಕ್ಯಾಮರಾ ಕಣ್ಣಿಗೂ ಸೆರೆಯಾಗಿಲ್ಲ

ಏನೂ ಕೆಲಸ ಮಾಡಿಲ್ಲ ಎಂಬ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ‌ ನಮಗೆ ಯಾವುದೇ ಸಹಕಾರ ದೊರೆತಿಲ್ಲ ಎಂದು ಆಯುಕ್ತೆ ಶಿಲ್ಪಾನಾಗ್​, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಇನ್ನು,  ಸಿ ಎಸ್‌ ಆರ್​​ ಫಂಡ್‌ ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತದೆ, ಸಹನೆ ಒಡೆದಾಗ ಏನು ಮಾಡಬೇಕು..? ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡುವುದು ಎಷ್ಟು ಸರಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Advertisement

ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದೆ. ಅವರ ಈಗೋದಿಂದ ನಾವು ಮಾಡುವ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ. ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ ಎಂದು ಶಿಲ್ಪಾನಾಗ್​ ಬೇಸರದಿಂದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ  : ದೆಹಲಿಯಲ್ಲಿ 1,044 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ, 89 ಮಂದಿ ಸಾವು: ಸಚಿವ ಜೈನ್

Advertisement

Udayavani is now on Telegram. Click here to join our channel and stay updated with the latest news.

Next