ನವದೆಹಲಿ: ದೆಹಲಿಯ ಚರ್ಚ್ ನಲ್ಲಿ ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಹಿಂದೂ ಸಂಘಟನೆಯ ಸದಸ್ಯರು ಚರ್ಚ್ ಗೆ ನುಗ್ಗಿ ಘೋಷಣೆಗಳನ್ನು ಕೂಗಿ ಬಳಿಕ ಅಲ್ಲಿದ್ದ ಪರಿಕರಗಳನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಭಾನುವಾರ ಬೆಳಿಗ್ಗೆ ಕೆಲವು ಹಿಂದೂ ಸಂಘಟನೆಗಳ ಸದಸ್ಯರು ಪ್ರಾರ್ಥನೆಯ ಸಮಯದಲ್ಲಿ ದೆಹಲಿಯ ಚರ್ಚ್‌ಗೆ ನುಗ್ಗಿ, ಸಂಗೀತ ಪರಿಕರಗಳನ್ನು ಧ್ವಂಸಗೊಳಿಸಿ ಆವರಣದೊಳಗೆ ಘೋಷಣೆಗಳನ್ನು ಕೂಗಿ ಗಲಾಟೆ ನಡೆಸಿದ್ದರು ಈ ವೇಳೆ ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಗಲಭೆಗೆ ಕಾರಣಕರ್ತನಾದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಚರ್ಚ್‌ನಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಈಶಾನ್ಯ ದೆಹಲಿಯ ತಾಹಿರ್‌ಪುರದಲ್ಲಿರುವ ಸಿಯೋನ್ ಪ್ರಾರ್ಥನಾ ಭವನದಲ್ಲಿ ಪ್ರಾರ್ಥನೆಯ ನೆಪದಲ್ಲಿ ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಭಾಷೆ ಬಳಸಲಾಗಿದೆ ಎಂದು ದಾಳಿಯಲ್ಲಿ ಭಾಗಿಯಾಗಿರುವ ಹಿಂದೂ ಸಂಘಟನೆಗಳು ಆರೋಪಿಸಿವೆ.
ದಾಳಿಯ ನಂತರ ಚರ್ಚ್ ಸದಸ್ಯರೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ ಪೀಠೋಪಕರಣಗಳು, ಹಾಗೂ ಸಂಗೀತ ಉಪಕರಣಗಳು ಚೆಲ್ಲಾಪಿಲ್ಲಿಯಾಗಿ ಪ್ರಾರ್ಥನಾ ಕೊಠಡಿಯ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ. ದಾಳಿಕೋರರು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸದಸ್ಯರು ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: Rajinikanth: ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಸ್ಪರ್ಶಿಸಿದ್ದು ತಪ್ಪಲ್ಲ..ರಜಿನಿಕಾಂತ್