Advertisement

Kolkata: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ… ಆಸ್ಪತ್ರೆ ಕೊಠಡಿ ಪುಡಿಪುಡಿ, ಕಲ್ಲುತೂರಾಟ

10:16 AM Aug 15, 2024 | Team Udayavani |

ಕೊಲ್ಕತ್ತಾ: ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಪರಿಣಾಮ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ವಿಭಾಗವನ್ನು ಧ್ವಂಸಗೊಳಿಸಿದೆ ಆಸ್ಪತ್ರೆಯ ಹೊರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಇದನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಘಟನೆಯಲ್ಲಿ ಕೆಲ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

Advertisement

ಈಗಾಗಲೇ ವೈದ್ಯಯ ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಮಹಿಳಾ ಸಿಬಂದಿಗಳಿಗೆ ಯಾವುದೇ ಸುರಕ್ಷತೆ ಇಲ್ಲ ಎಂದು ಆಸ್ಪತ್ರೆಯ ಮಹಿಳಾ ಸಿಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಇದರ ನಡುವೆ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವುದು ದೃಢಪಟ್ಟಿದ್ದು ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೊಲ್ಕತ್ತಾ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಜೊತೆಗೆ ಪ್ರಕರಣವನ್ನು ಹೈಕೋರ್ಟ್​ ಸಿಬಿಐಗೆ ವಹಿಸಿದ್ದು, ತನಿಖೆ ಚುರುಕುಗೊಳಿಸುವಂತೆ ಆದೇಶಿಸಿದೆ.

ಗುಂಪಿನ ಕೃತ್ಯ:
ಮಹಿಳೆಯರ ಗುಂಪೊಂದು ಶಾಂತಯುತವಾಗಿ ಆಸ್ಪತ್ರೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಬುಧವಾರ ತಡರಾತ್ರಿ ಯುವಕರ ಗುಂಪೊಂದು ಏಕಾಏಕಿ ಆಸ್ಪತ್ರೆಯ ಒಳಗೆ ದಾಳಿ ಮಾಡಿ ಆಸ್ಪತ್ರೆಯ ತುರ್ತು ಘಟಕವನ್ನು ಪುಡಿಗೈದು ಹೊರಬಂದಿದೆ ಈ ವೇಳೆ ಪೋಲೀಸರ ಮೇಲೆ ಕೂಡ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಸದ್ಯ ಆಸ್ಪತ್ರೆಯ ಸುತ್ತ ಹೆಚ್ಚಿನ ಭದ್ರತೆ ವ್ಯವಸ್ಥೆಗೊಳಿಸಲಾಗಿದ್ದು ಈ ಕುರಿತು ಮಾಹಿತಿ ನೀಡಿದ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್, ಹಿಂಸಾತ್ಮಕ, ಪ್ರಚೋದನಾತ್ಮಕ, ತಪ್ಪು ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇ ಇಂತಹ ವಿಧ್ವಂಸಕ ಕೃತ್ಯಕ್ಕೆ ಕಾರಣ ಎಂದು ಹೇಳಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next