Advertisement

ಮೊಬೈಲ್‌ ಗೀಳು ಕಳವಳಕಾರಿ

01:41 PM Oct 14, 2018 | |

ಬೀದರ: ಯುವಕರಲ್ಲಿ ಮೊಬೈಲ್‌ ಬಳಕೆಯ ಗೀಳು ಹೆಚ್ಚಾಗಿದ್ದು, ವ್ಯಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಅತಿಯಾದ ಬಳಕೆಯಿಂದ ಖನ್ನತೆಗೆ ಒಳಗಾಗುತ್ತಿದ್ದಾರೆ. ಇದು ಆತಂಕಕಾರಿ ಸಂಗತಿ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್‌. ರಾಘವೇಂದ್ರ ಹೇಳಿದರು.

Advertisement

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾರೀರಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯ ಕೂಡ ಅಷ್ಟೇ ಮುಖ್ಯ. ಆದರೆ, ಇತ್ತೀಚಿಗೆ ಸುಮಾರು 15ರಿಂದ 25 ವರ್ಷದೊಳಗಿನ ಯುವಜನರು ಹೆಚ್ಚು ಮಾನಸಿಕ ಖನ್ನತೆಗೆ ಒಳಗಾಗುತ್ತಿರುವುದು ಕಳವಳಕಾರಿ ವಿಷಯ. ಓದುವ ವಯಸ್ಸಿನಲ್ಲಿ ಪ್ರೀತಿ, ಪ್ರೇಮ, ದುಶ್ಚಟ, ಅತಿಯಾದ ಮೊಬೈಲ್‌ ಬಳಕೆ ಯುವಜನರನ್ನು ದಾರಿತಪ್ಪಿಸುತ್ತಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಆತ್ಮಹತ್ಯೆ ಪ್ರವೃತ್ತಿ ಹೆಚ್ಚುತ್ತಿದೆ. ಈ ಬಗ್ಗೆ ಕಾನೂನು ಪ್ರಾಧಿಕಾರಗಳು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಸರ್ವೋತ್ಛ ನ್ಯಾಯಾಲಯ ಹೇಳಿದೆ. ಉತ್ತಮ ವಾತಾವರಣದಿಂದ ಮಾತ್ರ ಮಾನಸಿಕ ಆರೋಗ್ಯ ಸುಧಾರಿಸಲು ಸಾಧ್ಯ. ಮಾನಸಿಕ ರೋಗಿಗಳನ್ನು ನೋಡಿ ಗೇಲಿ ಮಾಡಬಾರದು. ಅವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಲು ಮುಂದಾಗಬೇಕು. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಕಾನೂನು ಅನ್ವಯ ಅವರಿಗೆ ರಕ್ಷಣೆ ಒದಗಿಸಲು ಎಲ್ಲರೂ ಮುಂದಾಗಬೇಕು ಎಂದು ಹೇಳಿದರು. 

ಬ್ರಿಮ್ಸ್‌ ಮನೋರೋಗ ತಜ್ಞೆ ಪೂರ್ಣಿಮಾ ಮಾತನಾಡಿ, ಒತ್ತಡಗಳನ್ನು ನಿಗ್ರಹಿಸಬೇಕು. ಮಾನಸಿಕ ದೌರ್ಬಲ್ಯ, ಒತ್ತಡದ ಜೀವ ಹಲವು ಸಮಸ್ಯೆ ಮತ್ತು ರೋಗಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ಎಲ್ಲರೂ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಬೇಕು. ಮನಸ್ಸು ಕಲುಷಿತವಾದರೆ ದೇಹದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಮನೋರೋಗ ತಜ್ಞ ಡಾ| ಅಭಿಜಿತ್‌ ಪಾಟೀಲ ಮಾತನಾಡಿ, ಚಿತ್ತ ಚಂಚಲತೆ, ಚಿತ್ತ ವಿಕಲತೆ, ಮದ್ಯ ವ್ಯಸನ, ಮಾದಕ ವಸ್ತುಗಳ ಸೇವನೆ, ಖನ್ನತೆ, ಮನೋದೈಹಿಕ ಬೇನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಭಯ ಹುಟ್ಟಿಸುತ್ತಿವೆ ಎಂದರು.
 
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ| ರಾಜಶೇಖರ ಪಾಟೀಲ ಪ್ರಾಸ್ತಾವಿಕ ಮಾತನಾಡಿ, ಉತ್ತಮ ವಾತಾವರಣ ನಿರ್ಮಾಣ ಮಾಡುವಲ್ಲಿ ಪೋಷಕರ ಪಾತ್ರ ಬಹಳ ಮಹತ್ವದ್ದು ಎಂದರು. 

Advertisement

ಡಾ| ಅನೀಲ್‌ ಚಿಂತಾಮಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮನೋರೋಗ ತಜ್ಞ ಡಾ|ರಾಘವೇಂದ್ರ ವಘಾಲೆ, ಸಹಾಯಕ ಔಷಧ ನಿಯಂತ್ರಣಾಧಿಕಾರಿ ಶರಣಬಸಪ್ಪ, ಐಎಂಎ ಕಾರ್ಯದರ್ಶಿ ಡಾ| ಸಂಗಮೇಶ, ಸಹಾಯಕ ಆಡಳಿತಾಧಿಕಾರಿ ಅಬ್ದುಲ್‌ ಸಲೀಮ್‌, ಡಿಎನ್‌ಟಿ ಮೇಲ್ವಿಚಾರಕ ಪಂಢರಿನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಮೋಹನದಾಸ, ಹಿರಿಯ ಆರೋಗ್ಯ ಸಹಾಯಕ ಶಿವರಾಜ ಸಾಗರ, ಜಿಲ್ಲಾ ಮಾನಸಿಕ ಕಾರ್ಯಕ್ರಮದ ಮನೋಹರ ಅಲಶೆಟ್ಟಿ, ಜಿಲ್ಲಾ ಉಪ ಆರೋಗಕ್ಷಣಾಧಿಕಾರಿ ಸಂಗಪ್ಪಾ ಕಾಂಬ್ಳೆ, ಸುಭಾಷ ಮುಧಾಳೆ, ವೀರಶೆಟ್ಟಿ ಸೇರಿದಂತೆ ಇತರರು ಇದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಭಾರತೀಯ ವೈದ್ಯಕೀಯ ಸಂಘ ಹಾಗೂ ಬ್ರಿಮ್ಸ್‌ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next