Advertisement
ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ ಪ್ರಕೃತಿ ವಿಕೋಪದಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವುದಕ್ಕೆ, ಬೆಳೆ ವಿಮಾ ಯೋಜನೆಯಡಿ ಸರ್ವೇ
ನಂಬರ್‌ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗ ಕೈಗೊಳ್ಳಲು ಸರ್ವೇ ನಂಬರ್ ಆಯ್ಕೆ ಮಾಡಲು, ಕನಿಷ್ಠ
ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಈ ಸಮೀಕ್ಷೆಯಿಂದ ಅನುಕೂಲವಾಗಲಿದೆ ಎಂದು
ತಿಳಿಸಿದರು.
ಅನುಷ್ಠಾನಕ್ಕಾಗಿ ಹಾಗೂ ಆರ್‌ಟಿಸಿ ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದು. ಆದ್ದರಿಂದ ಜಿಲ್ಲೆಯ ರೈತ ಬಾಂಧವರು
ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ಬೆಳೆ ಸಮೀಕ್ಷೆ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ಮಾಹಿತಿ ದಾಖಲಿಸಲು ಸಹಕರಿಸಬೇಕು ಎಂದರು. ಈ ಸಮೀಕ್ಷೆ ಕಾರ್ಯ ಆ.24ರ ಒಳಗಾಗಿ ಅಪ್ಲೋಡ್ ಮಾಡಲು ಕಾಲಮಿತಿ ನಿಗದಿಪಡಿಸಲಾಗಿದೆ. ರೈತರು ನಿಗದಿತ ಸಮಯದೊಳಗೆ ಬೆಳೆದ ಮಾಹಿತಿ ಅಪ್ಲೋಡ್ ಮಾಡದಿದ್ದಲ್ಲಿ ಆ.24ರ ನಂತರ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನಿನಲ್ಲಿರುವ ಬೆಳೆ ಮಾಹಿತಿ ದಾಖಲಿಸಬಹುದು. ಮಾಹಿತಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿ ಕಾರಿಗಳು, ರೇಷ್ಮೆ-ನೀರಾವರಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.
Related Articles
ತಹಶೀಲ್ದಾರರ ನೇತೃತ್ವದಲ್ಲಿ ಬೆಳೆ ಸಮೀಕ್ಷೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯಾಗಿದ್ದು, ತಾಂತ್ರಿಕ ಸಮಸ್ಯೆ ಏನೇ ಬಂದರು ಪ್ರತಿ ತಾಲೂಕಿಗೊಬ್ಬರಂದತೆ ಟೆಕ್ನಿಷಿಯನ್ ನೀಡಲಾಗುವುದು ಎಂದರು.
Advertisement
ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗಂಗಾಧರ ದಿವಟರ ಮಾತನಾಡಿ, ಮಿಶ್ರ ಬೆಳೆ ಸರಿಯಾಗಿ ನಮೂದು ಮಾಡಬೇಕು. ನಮೂದಾದಬಗ್ಗೆ ರೂಪ್ ಲೆವೆಲ್ ಮಾನಿಟರ್ ಆಗುವ ಅಗ್ಯವಿದೆ ಎಂದರು. ಈ ವೇಳೆ ಜಿಪಂ ಸಿಇಒ ಟಿ. ಭೂಬಾಲನ, ಅಪರ ಜಿಲ್ಲಾಧಿಕಾರಿ
ಮಹಾದೇವ ಮುರಗಿ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಕೃಷಿ ಇಲಾಖೆ ಉಪ ನಿರ್ದೇಶಕ ಕೊಂಗವಾಡ ಇತರರಿದ್ದರು. ೋವಿಡ್-19 ಲಾಕ್‌ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಮೆಕ್ಕೆ ಜೋಳ ಬೆಳೆದ ರೈತರಿಗೆ 5 ಸಾವಿರ ರೂ. ಆರ್ಥಿಕ ನೆರವು ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 12,087 ಮೆಕ್ಕೆಜೋಳ ಬೆಳೆದ ಜಂಟಿ ಖಾತೆ ಭೂ ಹಿಡುವಳಿ ರೈತರ ಪೈಕಿ 4,732
ರೈತರು ಮಾತ್ರ ಆರ್ಥಿಕ ನೆರವಿಗಾಗಿ ದಾಖಲೆ ಸಲ್ಲಿಸಿದ್ದಾರೆ. ಉಳಿದ ರೈತರು ದಾಖಲಾತಿ ಸಲ್ಲಿಸಲು ಆ.15 ಕೊನೆ ದಿನವಾಗಿದೆ. ರೈತರು ಕೊನೆ ದಿನ ಕಾಯದೇ ಇಂದೇ ದಾಖಲಾತಿ ಸಲ್ಲಿಸಿ ಆರ್ಥಿಕ ನೆರವು ಪಡೆದುಕೊಳ್ಳಬೇಕು. – ಕ್ಯಾಪ್ಟನ್ ಡಾ|ಕೆ. ರಾಜೇಂದ್ರ, ಜಿಲ್ಲಾಧಿಕಾರಿ