Advertisement

ಚಿಕ್ಕಬಳ್ಳಾಪುರ: ಸೀಲ್ ಡೌನ್ ಪ್ರದೇಶಗಳಲ್ಲಿ ಸಂಚಾರಿ ಎಟಿಎಂ ಸೌಕರ್ಯ

06:07 PM Apr 21, 2020 | keerthan |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಹೆಚ್ಚಳ ಆಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕು ತಡೆಗೆ ಸಂಪೂರ್ಣ ಸೀಲ್ ಡೌನ್ ಮಾಡಲಾಗಿರುವ ಚಿಕ್ಕಬಳ್ಳಾಪುರ ನಗರದಲ್ಲಿ ಜನರಿಗೆ ಸಂಚಾರಿ ಎಟಿಎಂ ಸೌಲಭ್ಯ ಕಲ್ಪಿಸಲಾಗಿದೆ.

Advertisement

ಇಡೀ ಜಿಲ್ಲಾ ಕೇಂದ್ರವನ್ನು‌ ಜಿಲ್ಲಾಡಳಿತ ಸೀಲ್ ಡೌನ್ ಮಾಡಿರುವ ಕಾರಣ ಜನರ ಅವಶ್ಯಕತೆಗಳನ್ನು‌ ಪೂರೈಸಲು ಬೇಕಾದ ಹಣವನ್ನು ಗ್ರಾಹಕರ ಮನೆ ಬಾಗಿಲಿಗೆ‌ ತಲುಪುವ ಉದ್ದೇಶದಿಂದ ಕೆನರಾ ಬ್ಯಾಂಕ್ ಸಂಚಾರಿ ಎಟಿಎಂ ಸೌಕರ್ಯ ಕಲ್ಪಿಸಿದ್ದು ಸೋಮವಾರ ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿತು.

ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಂಡು ಸಂಚಾರಿ ಎಟಿಎಂನಿಂದ ಹಣ ಪಡೆದುಕೊಂಡರು. ಇನ್ನೂ ಒಂದು ವಾರದ ಕಾಲ ಜಿಲ್ಲಾ ಕೇಂದ್ರದಲ್ಲಿ ಸಂಚಾರಿ ಎಟಿಎಂ ವಾಹನ ಸಂಚರಿಸಲಿದೆ ಎಂದರು‌ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next