ಇನ್ಮುಂದೆ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಅಧೀಕ್ಷಕರು, ಮುಖ್ಯ ಪರಿವೀಕ್ಷರು ಕೂಡ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್
ಸೇರಿ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವಂತಿಲ್ಲ.
Advertisement
ಆಧುನಿಕ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಇದರಿಂದ ಅನುಕೂಲ ಹಾಗೂ ಅನಾನುಕೂಲ ಎರಡೂ ಇದೆ. ಎಸ್ಸೆಸ್ಸೆಲ್ಸಿ, ಪಿಯು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸ್‌ಗಳ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಪುಸ್ತಕ, ಮೊಬೈಲ್, ಪೆನ್‌ಡ್ರೈವ್ ಮೊದಲಾದ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ನಿಯಮ ರೂಪಿಸಿದೆ. ಇಷ್ಟಾ ದರೂ, ಪ್ರಮುಖ ಪರೀಕ್ಷೆಗಳಲ್ಲಿ ಪರೀಕ್ಷಾ ಅಕ್ರಮ ಸಂಪೂರ್ಣವಾಗಿ ನಿಂತಿಲ್ಲ.
Related Articles
ತೆಗೆದುಕೊಳ್ಳಬೇಕು ಎಂದ ರಿತ ಸರ್ಕಾರ,ಪ್ರಸಕ್ತ ಸಾಲಿನಿಂದ ಪರೀಕ್ಷಾ ಮೇಲ್ವಿಚಾರಕರು, ಶಿಕ್ಷಣ ಸಂಸ್ಥೆ ಪ್ರಾಂಶುಪಾಲರು,
ಕೇಂದ್ರದ ಮುಖ್ಯ ಅಧೀಕ್ಷಕರು, ಮುಖ್ಯ ಪರೀಕ್ಷಕರು, ಉಪ ಮುಖ್ಯ ಅಧೀಕ್ಷಕರ ಮೇಲು ವಿಶೇಷ ನಿಗಾ ಇಡಲಿದೆ. ವಿಶೇಷ ತನಿಖಾ ದಳ ತಪಾಸಣೆಗೆ ಬಂದ ಸಂದರ್ಭದಲ್ಲಿ ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಅಥವಾ ಬೇರೆ ಯಾವುದೇ ಅಧಿಕಾರಿಗಳು ಕೊಠಡಿಯೊಳಗೆ ಮೊಬೈಲ್ ಬಳಕೆ ಮಾಡುವುದು ಕಂಡಬಂದಲ್ಲಿ ಶಿಸ್ತು ಕ್ರಮ ತೆಗೆದು ಕೊಳ್ಳಲು ತೀರ್ಮಾನಿಸಿದೆ.
Advertisement
ತಾಂತ್ರಿಕ ಶಿಕ್ಷಣ ಇಲಾಖೆಯ ಡಿಪ್ಲೊಮಾ ಸೆಮಿಸ್ಟರ್ ಥಿಯರಿ ಪರೀಕ್ಷೆಗಳು ಡಿ.22ರಿಂದ ಆರಂಭ ವಾಗಲಿದೆ. ರಾಜ್ಯದ ಎಲ್ಲಾಪರೀಕ್ಷಾ ಕೇಂದ್ರದ ಪ್ರಾಂಶುಪಾಲರು, ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಹಾಗೂ ವಿದ್ಯಾರ್ಥಿಗಳು ಪರೀಕ್ಷೆಯ ವೇಳೆ ಮೊಬೈಲ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಇದನ್ನು ಉಲ್ಲಂ ಸಿದ ಅಧಿಕಾರಿಗಳ ವಿರುದಟಛಿವೂ ಕಠಿಣ ಕ್ರಮ ತೆಗೆದು ಕೊಳ್ಳಲಾಗುತ್ತದೆಂದು ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 2018ರ ಮಾರ್ಚ್‌ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆ ಯಲ್ಲಿ ಸುಮಾರು 14 ಲಕ್ಷ ವಿದ್ಯಾರ್ಥಿಗಳು
ಪರೀಕ್ಷೆ ಬರೆಯಲಿದ್ದಾರೆ. ಎಸ್ಸೆಸ್ಸೆಲ್ಸಿ ಬೋರ್ಡ್ ಹಾಗೂ ಪಿಯು ಇಲಾಖೆ ಇದಕ್ಕೆ ಬೇಕಾದ ಸಿದಟಛಿತೆಯನ್ನು ಮಾಡಿಕೊಂಡಿದೆ. ಪರೀಕ್ಷೆಯ ಅಕ್ರಮ ತಡೆಯಲು ಬೇಕಾದ ಕ್ರಮ ವಹಿಸುತ್ತಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಹಲವು ಕ್ರಮ ತೆಗೆದುಕೊಂಡಿದ್ದೇವೆ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಪರೀಕ್ಷೆ ನಡೆಯುತ್ತಿರುವ
ಸಂದರ್ಭದಲ್ಲಿ ಮೊಬೈಲ್ ಬಳಕೆ ನಿಷೇಧಿಸಲು ಈಗಾಗಲೇ ಕ್ರಮ ತೆಗೆದುಕೊಂಡಿದ್ದೇವೆ.
– ಸಿ.ಶಿಖಾ, ನಿರ್ದೇಶಕಿ, ಪಿಯು ಇಲಾಖೆ – ರಾಜು ಖಾರ್ವಿ ಕೊಡೇರಿ