Advertisement
ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಕೆಸರೆ 1ನೇಹಂತ, ಕುರಿಮಂಡಿ ಸರ್ಕಲ್ ಸಮೀಪದ 6ನೇ ಕ್ರಾಸ್ ಮನೆಯೊಂದರಲ್ಲಿ ಮೊಬೈಲ್ ಮೂಲಕ ಸಾರ್ವಜನಿಕರಿಂದ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಮೈಸೂರು ರೇಸ್ಕೋರ್ಸಿನಲ್ಲಿ ನಡೆಯುವ ರೇಸ್ಗೆ ಸಮನಾಗಿ ಅಕ್ರಮ ಲಾಭಗಳಿಸುವ ಉದ್ದೇಶದಿಂದ ಮೊಬೈಲ್ ಮೂಲಕ ಜೂಜಾಟವಾಡುತ್ತಿದ್ದರು. ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು, 4 ಮೊಬೈಲ್, 7 ಸಾವಿರ ರೂ. ನಗದು ಮತ್ತು ಇತರೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
Advertisement
Mysore: ಮೊಬೈಲ್ ಜೂಜಾಟ; ನಾಲ್ವರ ಬಂಧನ
07:33 PM Dec 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.