ಇಂಫಾಲ: ಮಣಿಪುರ ಸರ್ಕಾರವು ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ನಿಷೇಧವನ್ನು ನವೆಂಬರ್ 13 ರವರೆಗೆ ವಿಸ್ತರಿಸುವುದಾಗಿ ಬುಧವಾರ ಘೋಷಿಸಿದೆ. ರಾಜ್ಯದ ಕೆಲವು ಭಾಗಗಳಲ್ಲಿ ನಡೆದ ಗುಂಡಿನ ದಾಳಿಯಲ್ಲಿ 10 ಜನರು ಗಾಯಗೊಂಡ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಬಿಷ್ಣುಪುರ, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಮಣಿಪುರದ ಪೊಲೀಸ್ ಮಹಾನಿರ್ದೇಶಕ ಮಾಹಿತಿ ನೀಡಿದ್ದಾರೆ.
ಈ ನಡುವೆ ಶಸ್ತ್ರಾಸ್ತಧಾರಿಗಳ ಗುಂಪೊಂದು ಒಂದು ಸಮುದಾಯಕ್ಕೆ ಸೇರಿದ ಇಬ್ಬರನ್ನು ಅಪಹರಣ ಮಾಡಿದೆ ಎಂದು ಹೇಳಿ ಪ್ರತಿಭಟನೆಯನ್ನು ನಡೆಸಿ ಹಿಂಸಾಚಾರಕ್ಕೆ ಮುಂದಾಗಿದೆ.
ಈ ನಡುವೆ ಮಣಿಪುರದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ಚಿತ್ರಗಳು, ದ್ವೇಷ ಭಾಷಣ ಮತ್ತು ದ್ವೇಷದ ವೀಡಿಯೊ ಸಂದೇಶಗಳನ್ನು ಪ್ರಸಾರ ಮಾಡಲು ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸಿಕೊಳ್ಳುವ ಆತಂಕವಿದೆ ಎಂದು ಮಣಿಪುರ ಗೃಹ ಇಲಾಖೆ ಹೇಳಿಕೆ ನೀಡಿದ್ದು ಈ ಹಿನ್ನೆಲೆಯಲ್ಲಿ ಹಿಂಸಾಚಾರಕ್ಕೆ ಒಳಗಾಗದ ಜಿಲ್ಲೆಗಳಲ್ಲಿ ಮಣಿಪುರ ಸರ್ಕಾರ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿ ಆದೇಶ ಹೊರಡಿಸಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಎಲ್ಲವನ್ನು ಕಾರ್ಯಗತಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Jammu ಕಾಶ್ಮೀರದಲ್ಲಿ ಎನ್‌ಕೌಂಟರ್: ಭಯೋತ್ಪಾದಕನ ಹತ್ಯೆ, ಬಿಎಸ್ಎಫ್ ಯೋಧನಿಗೆ ಗಾಯ