Advertisement

ಕಾಶ್ಮೀರದ ಮೂರು ಜಿಲ್ಲೆಗಳಲ್ಲಿ ಮೊಬೈಲ್‌ ಇಂಟರ್‌ನೆಟ್‌ ಬಂದ್‌

12:01 PM Jun 22, 2018 | Team Udayavani |

ಶ್ರೀನಗರ : ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಿಡುವ ನಿಟ್ಟಿನಲ್ಲಿ  ಬೇಸಗೆ ರಾಜಧಾನಿಯ ಸಹಿತ ಕಾಶ್ಮೀರ ಕಣಿವೆಯ ಮೂರು ಜಿಲ್ಲೆಗಳಲ್ಲಿ ಇಂದು ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಅಮಾನತುಗೊಳಿಸಲಾಯಿತು. 

Advertisement

ಶ್ರೀನಗರ, ಅನಂತನಾಗ್‌ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸೇವೆಯನ್ನು ಅಮಾನತುಗೊಳಿಸಲಾಗಿದ್ದು ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಇದೇ ವೇಳೆ ಅನಂತನಾಗ್‌ ಜಿಲ್ಲೆಯಲ್ಲಿ ಎನ್‌ಕೌಂಟರ್‌ ಸಾಗಿದ್ದು ಅಲ್ಲಿ ಇಬ್ಬರು ಉಗ್ರರು ಮತ್ತು ಓರ್ವ ಪೊಲೀಸ್‌ ಮೃತಪಟ್ಟಿರುವುದಾಗಿ ವರದಿಯಾಗಿದೆ. ಉಗ್ರರಲ್ಲಿ ಒಬ್ಟಾ ಶ್ರೀನಗರದವನೆಂದು ತಿಳಿದುಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next