Advertisement

Rajasthan;10ನೇ ತರಗತಿಯ ವಿದ್ಯಾರ್ಥಿಯಿಂದ ಇನೊಬ್ಬನಿಗೆ ಇರಿತ: ಕೋಮುಗಲಭೆ

09:17 PM Aug 17, 2024 | Team Udayavani |

ಜೈಪುರ: ರಾಜಸ್ಥಾನದ ಉದಯಪುರದ ಸರಕಾರಿ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ಬಾಲಕನಿಗೆ ಚಾಕುವಿನಿಂದ ಇರಿದ ಘಟನೆ ಕೋಮುಗಲಭೆಗೆ ಕಾರಣವಾದ ಹಿನ್ನೆಲೆಯಲ್ಲ ಹಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ ಮತ್ತು ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

Advertisement

ಶುಕ್ರವಾರ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ಬಂಧನದಲ್ಲಿದ್ದಾನೆ. ಆರೋಪಿ ಬಾಲಕನ ಮನೆಯನ್ನು ಜಿಲ್ಲಾಡಳಿತ ಜೆಸಿಬಿ ಯಂತ್ರಗಳನ್ನು ಬಳಸಿ ನೆಲಸಮಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಸಿಬಂದಿ ಸಮ್ಮುಖದಲ್ಲಿ ಧ್ವಂಸಗೊಳಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಉದಯಪುರದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಂದಿನ ಆದೇಶದವರೆಗೆ ಮುಚ್ಚಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್ ತಿಳಿಸಿದ್ದಾರೆ.

ಗಾಯಗೊಂಡ ಬಾಲಕನ ಚಿಕಿತ್ಸೆಗಾಗಿ ವಿಶೇಷ ವಿಮಾನದ ಮೂಲಕ ಜೈಪುರದಿಂದ ಉದಯಪುರಕ್ಕೆ ಮೂವರು ವೈದ್ಯರ ತಂಡವನ್ನು ಕಳುಹಿಸಲಾಗಿದ್ದು, ಸ್ಥಿತಿ ಸ್ಥಿರವಾಗಿದೆ.

ಉದಯಪುರ ನಗರ, ಬೆಡ್ಲಾ, ಬಡಗಾಂವ್, ಬ್ಲೀಚಾ, ದೇಬರಿ, ಎಕ್ಲಿಂಗ್‌ಪುರ, ಕಾನ್ಪುರ, ಧೀಕ್ಲಿ ಮತ್ತು ಭುವನಾ ಪ್ರದೇಶದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ 24 ಗಂಟೆಗಳ ಕಾಲ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿ ವಿಭಾಗೀಯ ಆಯುಕ್ತ ರಾಜೇಂದ್ರ ಭಟ್ ಆದೇಶ ಹೊರಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹರಡುತ್ತಿರುವ ವದಂತಿಗಳನ್ನು ನಿರ್ಲಕ್ಷಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Advertisement

ಶುಕ್ರವಾರ, ಭಟ್ಟಿಯಾನಿ ಚೋಹಟ್ಟಾದಲ್ಲಿನ ಸರ್ಕಾರಿ ಶಾಲೆಯ ಹೊರಗೆ ಇರಿದ ಘಟನೆಯ ನಂತರ ಕೋಮು ಉದ್ವಿಗ್ನತೆಯ ಮಧ್ಯೆ ಗುಂಪೊಂದು ಕಾರುಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದೆ. ನಗರದಲ್ಲಿ ಜನ ಸೇರುವುದನ್ನು ನಿಷೇಧಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪೊಲೀಸರ ಪ್ರಕಾರ, ಘಟನೆಯನ್ನು ವಿರೋಧಿಸಿ ಕೆಲವು ಹಿಂದೂ ಸಂಘಟನೆಗಳ ಸದಸ್ಯರು ನಗರದ ಮಧುಬನ್‌ನಲ್ಲಿ ಜಮಾಯಿಸಿದ್ದು, ಈ ವೇಳೆ ಕಲ್ಲು ತೂರಾಟ ನಡೆದು ಮೂರ್ನಾಲ್ಕು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ ಉದ್ವಿಗ್ನತೆ ಹೆಚ್ಚಾದ ಕಾರಣ ಹತ್ತಿರದ ಪ್ರದೇಶಗಳಲ್ಲಿ ಮಾರುಕಟ್ಟೆಗಳನ್ನು ಮುಚ್ಚಲಾಯಿತು. ಶಾಪಿಂಗ್ ಮಾಲ್‌ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next